Wednesday, September 2, 2026
spot_img
More
    spot_img
    HomeStateDistrictವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ವಿದ್ಯುಕ್ತ ಚಾಲನೆ; ಕಾಡಿನಿಂದ ನಾಡಿನತ್ತ ಗಜಪಡೆ

    ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ವಿದ್ಯುಕ್ತ ಚಾಲನೆ; ಕಾಡಿನಿಂದ ನಾಡಿನತ್ತ ಗಜಪಡೆ

    ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಇಂದು ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಯಿತು.

    Advertisement

    ವೀರನಹೊಸಹಳ್ಳಿ ಗ್ರಾಮದ ಬಳಿ ಗಜಪಡೆಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ, ಪಶುಸಂಗೋಪನಾ ಸಚಿವ ವೆಂಕಟೇಶ್‌ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಿದರು.

    ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಒಟ್ಟು 14 ಆನೆಗಳನ್ನು ಆಯ್ಕೆ ಮಾಡಲಾಗಿದ್ದು, ಅದರಲ್ಲಿ ಇಂದು ಅಭಿಮನ್ಯು ನೇತೃತ್ವದ 9 ಆನೆಗಳು ಮೈಸೂರಿಗೆ ಆಗಮಿಸುತ್ತಿವೆ.

    ಅಭಿಮನ್ಯು, ಭೀಮ, ಕಂಜನ್‌, ಧನಂಜಯ, ಪ್ರಶಾಂತ, ಮಹೇಂದ್ರ, ಏಕಲವ್ಯ, ಕಾವೇರಿ ಹಾಗೂ ಲಕ್ಷ್ಮೀ ಸೇರಿ 9 ಆನೆಗಳು ನಾಡಿನತ್ತ ಪಯಣ ಬೆಳೆಸಿವೆ.

    ಗಜಪಯಣ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಜಿ.ಡಿ.ಹರೀಶ್‌ ಗೌಡ, ಪುಷ್ಪಾ ಅಮರನಾಥ್‌, ಸೇರಿದಂತೆ ಹಿರಿಯ ಅರಣ್ಯಾಧಿಕಾರಿಗಳು ಭಾಗಿಯಾಗಿದ್ದರು. ಆದರೆ ಇಂದಿನ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರೇ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ನಾಡಹಬ್ಬವಾದ ದಸರಾದ ಮೊದಲ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವರೇ ಗೈರಾಗಿದ್ದಾರೆ ಎಂದರೆ ಹೇಗೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ.

    ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಶಾಕ್:‌ ರಜೆ ಹಾಗೂ ವಾರದ ರಜೆ ರದ್ದು

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading