Saturday, November 7, 2026
spot_img
More
    spot_img
    HomeStateDistrictಭಾರೀ ಮಳೆ: ʼಪರಮಾತ್ಮʼ ಹಾಡು ಚಿತ್ರೀಕರಣಗೊಂಡಿದ್ದ ಮಂಜರಾಬಾದ್ ಕೋಟೆಯ ಒಂದು ಭಾಗ ಕುಸಿತ

    ಭಾರೀ ಮಳೆ: ʼಪರಮಾತ್ಮʼ ಹಾಡು ಚಿತ್ರೀಕರಣಗೊಂಡಿದ್ದ ಮಂಜರಾಬಾದ್ ಕೋಟೆಯ ಒಂದು ಭಾಗ ಕುಸಿತ

    ಸಕಲೇಶಪುರ: ಮಳೆಯಿಂದಾಗಿ ಐತಿಹಾಸಿಕ ಹಿನ್ನೆಲೆಯುಳ್ಳ ಮಂಜರಾಬಾದ್ ಕೋಟೆಯ ಒಂದು ಭಾಗ ಶನಿವಾರ ತಡರಾತ್ರಿ ಕುಸಿದಿದೆ. ಸೈನಿಕರು ವಿಶ್ರಾಂತಿ ಪಡೆಯುತ್ತಿದ್ದ ಕೋಟೆಯ ಭಾಗ ಎಂದು ಹೇಳಲಾಗುವ ಪ್ರದೇಶವು ಕುಸಿದುಬಿದ್ದಿದೆ. ಮುಂಜಾನೆ ಕೋಟೆಯ ಕಾವಲು ಸಿಬ್ಬಂದಿ ಕರ್ತವ್ಯ ನಿರ್ವಹಿಸಲು ಬಂದಾಗ ಕುಸಿತಗೊಂಡಿರುವುದು ಗೊತ್ತಾಗಿದೆ.

    ನಕ್ಷತ್ರಾಕಾರದ ಕೋಟೆ: ನಕ್ಷತ್ರಾಕಾರದಲ್ಲಿರುವ ಮಂಜರಾಬಾದ್ ಕೋಟೆ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತದೆ. ನೂರಾರು ಪ್ರವಾಸಿಗರು ಪ್ರತಿನಿತ್ಯ ಇಲ್ಲಿಗೆ ಭೇಟಿ ನೀಡುತ್ತಾರೆ. ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿರುವ ಹಾಗೂ ಐತಿಹಾಸಿಕ ಮಂಜರಾಬಾದ್ ಕೋಟೆಯನ್ನು 1792ರಲ್ಲಿ ಟಿಪ್ಪು ಸುಲ್ತಾನ್ ಕಟ್ಟಿಸಿದ್ದರು.

    ಈ ಬೃಹತ್ ಕೋಟೆಯು ಸಮುದ್ರ ಮಟ್ಟದಿಂದ 988 ಅಮೀಟರ್ ಎತ್ತರದಲ್ಲಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಕೇಂದ್ರದಿಂದ 5 ಕಿ.ಮೀ. ಅಂತರದಲ್ಲಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಅಡಾಣಿ ಗುಡ್ಡದ ಮೇಲೆ ಈ ಕೋಟೆ ನಿರ್ಮಾಣವಾಗಿದೆ.

    ಇದು ಪ್ರೇಕ್ಷಣೀಯ ಸ್ಥಳವಾಗಿದ್ದು, ಕನ್ನಡದ ಪರಮಾತ್ಮ ಸೇರಿದಂತೆ ಹಲವು ಚಿತ್ರಗಳು ಇಲ್ಲಿ ಚಿತ್ರೀಕರಣಗೊಂಡಿವೆ.

    ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಶಾಕ್:‌ ರಜೆ ಹಾಗೂ ವಾರದ ರಜೆ ರದ್ದು

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search