Thursday, September 3, 2026
spot_img
More
    spot_img
    HomeLatest newsರಾಜ್ಯದಲ್ಲಿ ಮತ್ತಷ್ಟು ಚುರುಕುಗೊಂಡ ವರುಣ: ಎಲ್ಲ ಜಿಲ್ಲೆಗಳಿಗೂ ಯೆಲ್ಲೊ ಅಲರ್ಟ್‌

    ರಾಜ್ಯದಲ್ಲಿ ಮತ್ತಷ್ಟು ಚುರುಕುಗೊಂಡ ವರುಣ: ಎಲ್ಲ ಜಿಲ್ಲೆಗಳಿಗೂ ಯೆಲ್ಲೊ ಅಲರ್ಟ್‌

    ಬೆಂಗಳೂರು: ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೊಂಚ ಬಿಡುವು ನೀಡಿದ್ದ ವರುಣ ಈಗ ಮತ್ತೆ ಚುರುಕು ಪಡೆದುಕೊಂಡಿದ್ದು, ಇನ್ನೂ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    Advertisement

    ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ನಾಳೆಯಿಂದ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

    ರಾಜ್ಯದಲ್ಲಿ ಆಗಸ್ಟ್.‌7ರವರೆಗೆ ಧಾರಾಕಾರ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

    ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಿಂದಲೂ ಭಾರೀ ಮಳೆಯಾಗುತ್ತಿದ್ದು, ಹಲವಾರು ರಸ್ತೆಗಳು ಜಲಾವೃತಗೊಂಡಿವೆ. ಹಠಾತ್‌ ಮಳೆಯಿಂದಾಗಿ ನಗರದಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಪ್ರದೇಶಗಳಲ್ಲಿ ಹಠಾತ್‌ ಪ್ರವಾಹ ಉಂಟಾಗಿದೆ.

    ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಮೋಡ ಕವಿದ ವಾತಾವರಣವಿರಲಿದ್ದು, ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.

    ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಶಾಕ್:‌ ರಜೆ ಹಾಗೂ ವಾರದ ರಜೆ ರದ್ದು

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading