ಬೆಂಗಳೂರು: ಪಡಿತರ ಚೀಟಿಯಲ್ಲಿ ಹೆಸರು ಮತ್ತಿತರ ಸೇರ್ಪಡೆ ಇಲ್ಲವೆ ತಿದ್ದುಪಡಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಇದೀಗ ಮತ್ತೊಮ್ಮೆ ಅನುಮತಿ ನೀಡಿದೆ.
ಈ ಆಗಸ್ಟ್ ಒಂದರಿಂದಲೇ ಈ ಬದಲಾವಣೆಗೆ ಅವಕಾಶ ಕಲ್ಪಿಸಲಾಗಿದ್ದು ಮಾಸಾಂತ್ಯದವರೆಗೂ ಅವಕಾಶ ವಿಸ್ತರಿಸಿದೆ. ಪಡಿತರ ಚೀಟಿದಾರರು ಸೂಕ್ತ ದಾಖಲೆಗಳನ್ನು ಒದಗಿಸಿ ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ಒದಗಿಸಲಾಗಿದೆ.
ಬೆಂಗಳೂರು ಒನ್, ಸೈಬರ್ ಸೆಂಟರ್‌ಗಳಲ್ಲಿ ಆಸಕ್ತರು ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಎಪಿಎಲ್ ಕಾರ್ಡ್ ಪಡೆಯದವರೂ ಸಹ ಅರ್ಜಿ ಸಲ್ಲಿಸಬಹುದಾಗಿದ್ದು ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳ ಹೆಸರು ಅಥವಾ ಕುಟುಂಬದ ಇತರೆ ಸದಸ್ಯರ ಸೇರ್ಪಡೆ ಮಾಡಿಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸಲು ಸದಸ್ಯರ ಆಧಾರ್ ಕಾರ್ಡ್ ಕಡ್ಡಾಯ, ಸದಸ್ಯರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಆರು ವರ್ಷ ಮೇಲ್ಪಟ್ಟವರಿಗೆ). ಜನನ ಪ್ರಮಾಣ ಪತ್ರ (ಆರು ವರ್ಷದ ಒಳಗಿನ ಮಕ್ಕಳಿಗೆ) ಗಳನ್ನು ಒದಗಿಸುವುದು ಕಡ್ಡಾಯ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಪ್ರಕಟಣೆ ತಿಳಿಸಿದೆ.
ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಶಾಕ್: ರಜೆ ಹಾಗೂ ವಾರದ ರಜೆ ರದ್ದು
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


