Tuesday, September 1, 2026
spot_img
More
    spot_img
    HomeStateDistrictಕಲ್ಪತರು ನಾಡು ತುಮಕೂರಿನಲ್ಲಿ ಅಮಾನವೀಯ ಘಟನೆ; 19 ನವಿಲುಗಳ ನಿಗೂಢ ಸಾವು

    ಕಲ್ಪತರು ನಾಡು ತುಮಕೂರಿನಲ್ಲಿ ಅಮಾನವೀಯ ಘಟನೆ; 19 ನವಿಲುಗಳ ನಿಗೂಢ ಸಾವು

    ತುಮಕೂರು: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಐದು ಹುಲಿಗಳು ಹಾಗೂ 18 ಕೋತಿಗಳ ಮಾರಣಹೋಮ ನಡೆದ ಬೆನ್ನಲ್ಲೇ ಇದೀಗ ಕಲ್ಪತರು ನಾಡು ತುಮಕೂರಿನಲ್ಲಿ ರಾಷ್ಟ್ರಪಕ್ಷಿ ನವಿಲುಗಳ ಸಾವು ಸಂಭವಿಸಿದೆ.

    Advertisement

    ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಮಿಡಿಗೇಶಿಯ ಹನುಮಂತಪುರದಲ್ಲಿ 19 ನವಿಲುಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ.

    ಸದ್ಯ ಸಾವನ್ನಪ್ಪಿರುವ ನವಿಲುಗಳ ಸ್ಯಾಂಪಲ್‌ನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದ್ದು, ವರದಿ ಬಂದ ಬಳಿಕವೇ ಸಾವಿಗೆ ನಿಖರ ಕಾರಣ ಏನೆಂದು ತಿಳಿಯಲಿದೆ.

    ಮಿಡಿಗೇಶಿಯ ಹನುಮಂತಪುರ ಗ್ರಾಮದ ಕೆರೆ ಕೋಡಿ ನೀರು ಹರಿಯುವ ಪಕ್ಕದ ಜಮೀನಿನಲ್ಲಿ 5 ಗಂಡು ಹಾಗೂ 14 ಹೆಣ್ಣು ನವಿಲುಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಇವು ಆಗಸ್ಟ್.‌1ರಂದೇ ಮೃತಪಟ್ಟಿವೆ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.

    ಕ್ರಿಮಿನಾಶಕ ಸಿಂಪಡಣೆ ಮಾಡಿರುವ ಬೆಳೆಗಳನ್ನು ಸೇವಿಸಿ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಪ್ರಾಣಿಪ್ರಿಯರು ಬೇಸರ ವ್ಯಕ್ತಪಡಿಸಿದ್ದಾರೆ.

    ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದು, ವಿಷಪ್ರಾಶನದಿಂದಲೇ ನವಿಲುಗಳು ಸಾವನ್ನಪ್ಪಿವೆ ಎಂದು ಆರೋಪಿಸಿದ್ದಾರೆ. ವಿಷಪ್ರಾಶನ ದೃಢವಾದರೆ, ಕಿಡಿಗೇಡಿಗಳನ್ನು ಸುಮ್ಮನೇ ಬಿಡಬೇಡಿ. ಅವರಿಗೆ ಕಠಿಣ ಶಿಕ್ಷೆಯಾಗಲಿ ಎಂದು ಆಗ್ರಹಿಸಿದ್ದಾರೆ.

    ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಶಾಕ್:‌ ರಜೆ ಹಾಗೂ ವಾರದ ರಜೆ ರದ್ದು

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading