ವಿಜಯಪುರ: ಮುಸ್ಲಿಂ ಯುವತಿಯರನ್ನು ಮದುವೆಯಾದರೆ ಹಿಂದೂ ಯುವಕರಿಗೆ ₹5 ಲಕ್ಷ ನೀಡುವುದಾಗಿ ಘೋಷಣೆ ಮಾಡಿದ ಕಾರಣ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈಗ ಅವರಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ಕಲಬುರಗಿ ವಿಭಾಗೀಯ ಪೀಠವು ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಮಧ್ಯಂತರ ಆದೇಶ ಹೊರಡಿಸಿದೆ.
ಕೊಪ್ಪಳ ನಗರದಲ್ಲಿ ಕಳೆದ ತಿಂಗಳು ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಜಯಪುರ, ಕಲಬುರಗಿ ಮತ್ತು ಕೊಪ್ಪಳದಲ್ಲಿ ಮೂರು ದೂರುಗಳು ದಾಖಲಾಗಿದ್ದವು. ಬಳಿಕ ವಿಜಯಪುರ ಮತ್ತು ಕಲಬುರಗಿಯಲ್ಲಿ ದಾಖಲಾಗಿದ್ದ ದೂರುಗಳನ್ನು ಪೊಲೀಸರು ಕೊಪ್ಪಳಕ್ಕೆ ವರ್ಗಾಯಿಸಿದ್ದರು.
ಈ ದೂರುಗಳನ್ನು ರದ್ದುಪಡಿಸಬೇಕು ಎಂದು ಯತ್ನಾಳ್ ಕಲಬುರಗಿ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ವಿಚಾರಣೆ ನಡೆಸಿದ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರು, ಯತ್ನಾಳ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ತಾತ್ಕಾಲಿಕ ಆದೇಶ ನೀಡಿದರು.
ಇತ್ತೀಚೆಗೆ ಕೊಲೆಯಾದ ಹಿಂದೂ ಯುವಕ ಗವಿಸಿದ್ದಪ್ಪನ ಕುಟುಂಬಕ್ಕೆ ಸಾಂತ್ವನ ಹೇಳಲು ಭೇಟಿ ನೀಡಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಮುಸ್ಲಿಂ ಸಮುದಾಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. “ಮಸೀದಿಯ ಮುಂದೆಯೇ ಕೊಲೆಯಾಗಿದ್ದರೂ ಯಾರೂ ರಕ್ಷಣೆಗೆ ಬಂದಿಲ್ಲ” ಎಂದು ಪ್ರಶ್ನಿಸಿದರು.
ಅಲ್ಲದೆ, “ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಪ್ರೀತಿಸಿ ಮದುವೆಯಾಗಬಾರದು ಎಂದು ಎಲ್ಲಿಯೂ ನಿಯಮವಿಲ್ಲ. ಇನ್ಮುಂದೆ ಈ ರೀತಿ ಮದುವೆಯಾಗುವ ಹಿಂದೂ ಯುವಕರಿಗೆ ₹5 ಲಕ್ಷ ನೀಡುವ ಅಭಿಯಾನವನ್ನು ನಾವು ಆರಂಭಿಸುತ್ತೇವೆ” ಎಂದು ಭಾಷಣದಲ್ಲಿ ಘೋಷಿಸಿದ್ದರು. ಈ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿವೆ.
ಯತ್ನಾಳ್ ತಮ್ಮ ಅರ್ಜಿಯಲ್ಲಿ ಕೊಪ್ಪಳ ಟೌನ್ ಪೊಲೀಸ್ ಠಾಣೆ ಹಾಗೂ ದೂರುದಾರರಾದ ಉಮರ್ ಜುನೈದ್ ಖುರೇಷಿ, ಮೈನುದ್ದೀನ್ ಬೀಳಗಿ ಮತ್ತು ಅಬ್ದುಲ್ ಕಲಾಂ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ. ಈ ದೂರಿನ ಆಧಾರದ ಮೇಲೆ ಕೊಪ್ಪಳ ಟೌನ್ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಅದನ್ನು ರದ್ದುಪಡಿಸುವಂತೆ ಯತ್ನಾಳ್ ಕೋರಿದ್ದಾರೆ.
ಬೆಂಗಳೂರು ಸೇರಿ ಕರ್ನಾಟಕದಲ್ಲಿ ಇಂದಿನಿಂದ ವರುಣನ ಅಬ್ಬರ
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


