Friday, September 4, 2026
spot_img
More
    spot_img
    HomeLatest newsಸುಂಕ ನೀತಿಗಾಗಿ ಭಾರತದ ಕ್ಷಮೆಯಾಚಿಸಿ ಎಂದ ಅಮೇರಿಕ ತಜ್ಞ: ಟ್ರಂಪ್ ಹೇಳಿದ್ದೇನು ?

    ಸುಂಕ ನೀತಿಗಾಗಿ ಭಾರತದ ಕ್ಷಮೆಯಾಚಿಸಿ ಎಂದ ಅಮೇರಿಕ ತಜ್ಞ: ಟ್ರಂಪ್ ಹೇಳಿದ್ದೇನು ?

    Advertisement

    ಭಾರತದ ಮೇಲೆ ಅಮೆರಿಕ ಹೆಚ್ಚುವರಿ ಸುಂಕ ವಿಧಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ, ಚೀನಾದ ಶೃಂಗಸಭೆಯಲ್ಲಿ ಚೀನಾ ಮತ್ತು ರಷ್ಯಾದ ಅಧ್ಯಕ್ಷರ ಜೊತೆ ಬಹಳ ಆಪ್ತವಾಗಿ ಕಾಣಿಸಿಕೊಂಡು ಅಮೆರಿಕಕ್ಕೆ ತಲೆ ನೋವುಂಟು ಮಾಡಿದೆ.

    ಅಮೆರಿಕದ ತಜ್ಞರೊಬ್ಬರು ಟ್ರಂಪ್ ನಿರ್ಧಾರವನ್ನು ಬಹಿರಂಗವಾಗಿ ಟೀಕಿಸಿದ್ದಾರೆ. ನ್ಯೂಯಾರ್ಕ್ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಎಡ್ವರ್ಡ್ ಪ್ರೈಸ್ ಹೇಳಿದ ಅಭಿಪ್ರಾಯ ಇಲ್ಲಿದೆ. ಭಾರತದ ಮೇಲಿನ ಹೆಚ್ಚಿನ ಸುಂಕಗಳನ್ನು ಹಿಂದಕ್ಕೆ ಪಡೆಯಬೇಕು, ಆ ಸುಂಕವನ್ನು ಶೂನ್ಯಕ್ಕೆ ಇಳಿಸಬೇಕು ಮತ್ತು ಭಾರತದ ಕ್ಷಮೆ ಯಾಚಿಸಬೇಕು ಎಂದು ಅಮೆರಿಕದ ಪ್ರಮುಖ ತಜ್ಞರೊಬ್ಬರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಒತ್ತಾಯಿಸಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

    ಭಾರತವು 21ನೇ ಶತಮಾನವನ್ನು ರೂಪಿಸುವಲ್ಲಿ ‘ನಿರ್ಣಾಯಕ’ ಪಾತ್ರ ಹೊಂದಿದೆ. ಡೊನಾಲ್ಡ್ ಟ್ರಂಪ್ ಅವರ ಸುಂಕ ನೀತಿಯು ವಾಷಿಂಗ್ಟನ್‌ನ ಅತ್ಯಂತ ಪ್ರಮುಖ ಪಾಲುದಾರಿಕೆಯನ್ನು ಅಪಾಯಕ್ಕೆ ಸಿಲುಕಿಸುತ್ತಿದೆ ಎಂದು ಎಚ್ಚರಿಸಿದ್ದಾರೆ. ಅಮೆರಿಕದ ಅಧ್ಯಕ್ಷ ಟ್ರಂಪ್ ಭಾರತದ ಮೇಲೆ ಶೇ. 50ರಷ್ಟು ಸುಂಕಗಳನ್ನು ಏಕೆ ವಿಧಿಸುತ್ತಾರೆ ಎಂಬುದನ್ನು ನನಗೆ ಅರ್ಥವಾಗುತ್ತಿಲ್ಲ’. ಪ್ರಧಾನಿ ಮೋದಿ ಸಾಕಷ್ಟು ಬುದ್ಧಿವಂತರಾಗಿದ್ದಾರೆ. ಅವರಿಗೆ ಅಮೆರಿಕದ ಹೊರತು ಆಯ್ಕೆಗಳಿವೆ ಎಂದು ಹೇಳಿದ್ದಾರೆ.

    ಶ್ವೇತಭವನದಲ್ಲಿ ಮಾಧ್ಯಮಗಳು ಕೇಳಿದ ಭಾರತದ ಮೇಲೆ ವಿಧಿಸಲಾದ ಹೆಚ್ಚಿನ ತೆರಿಗೆಗಳನ್ನು ತೆಗೆದುಹಾಕುವ ಕುರಿತು ಚಿಂತನೆ ನಡೆಸುತ್ತಿದ್ದೀರಾ ಎಂಬ ಪ್ರಶ್ನೆಗೆ ಟ್ರಂಪ್, ಭಾರತ ನಮಗೆ ಅಪಾರ ಸುಂಕಗಳನ್ನು ವಿಧಿಸುತ್ತಿತ್ತು, ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ, ಆದ್ದರಿಂದ ಅಮೆರಿಕ ಭಾರತದೊಂದಿಗೆ ಹೆಚ್ಚು ವ್ಯವಹಾರ ಮಾಡುತ್ತಿಲ್ಲ. ಭಾರತದ ಜೊತೆ ನಮ್ಮ ವ್ಯಾಪಾರ-ವ್ಯವಹಾರ ತುಂಬಾ ಕಡಿಮೆ ಇದೆ. ಅವರು (ಭಾರತ) ನಮ್ಮಲ್ಲಿ ಅಪಾರ ಪ್ರಮಾಣದ ವ್ಯಾಪಾರ ಮಾಡುತ್ತಿದ್ದಾರೆ. ನಮ್ಮ ಪಾಲು ತುಂಬಾ ಕಡಿಮೆ ಇದೆ.

    ಭಾರತದ ಮೇಲೆ ವಿಧಿಸಲಾದ ಹೆಚ್ಚಿನ ತೆರಿಗೆಗಳನ್ನು ತೆಗೆದುಹಾಕುವ ಕುರಿತು ಯಾವುದೇ ಚಿಂತನೆಗಳೂ ಇಲ್ಲ. ನಾವು ಭಾರತದೊಂದಿಗೆ ಉತ್ತಮ ಸಂಬಂಧ ಹೊಂದಿದ್ದೇವೆ. ಆದರೆ, ಹಲವು ವರ್ಷಗಳಿಂದ ಉಭಯ ರಾಷ್ಟ್ರಗಳ ನಡುವಿನ ಆರ್ಥಿಕ ಸಂಬಂಧ ಏಪಕ್ಷೀಯವಾಗಿದ್ದು, ನಾನು ಅಧಿಕಾರಕ್ಕೆ ಬಂದ ಬಳಿಕ ಎಲ್ಲವೂ ಬದಲಾಯಿತು ಎಂದು ಹೇಳಿದ್ದಾರೆ.

    ಭಾರತವು ತನ್ನ ಉತ್ಪನ್ನಗಳನ್ನು ಅಮೆರಿಕಾದಲ್ಲಿರಿಸಿ, ನಮಗೆ ಹೆಚ್ಚಿನ ತೆರಿಗೆ ಹೇರುತ್ತಿತ್ತು. ಇದೀಗ ನಾವೇ ಹೆಚ್ಚಿನ ತೆರಿಗೆ ವಿಧಿಸುತ್ತಿರುವುದರಿಂದ ಪರಿಸ್ಥಿತಿ ಬದಲಾಗಿದೆ ಎಂದು ಟ್ರಂಪ್ ಹೇಳಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading