Friday, November 6, 2026
spot_img
More
    spot_img
    HomeStateDistrictಕರ್ನಾಟಕ ಹವಾಮಾನ: ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

    ಕರ್ನಾಟಕ ಹವಾಮಾನ: ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

    ಕೆಲವು ದಿನಗಳಿಂದ ಮಳೆರಾಯ ಕರ್ನಾಟಕದಲ್ಲಿ ಬಿಡುವು ನೀಡಿದ್ದ. ಆದರೆ ಈಗ ಮತ್ತೆ ಮಳೆ ಆರಂಭವಾಗುವ ಸೂಚನೆ ಸಿಕ್ಕಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಿದೆ.

    ಬೆಂಗಳೂರು ನಗರದಲ್ಲಿ ಮಂಗಳವಾರ ಮೋಡ ಕವಿದ ವಾತಾವರಣವಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

    ಮುನ್ಸೂಚನೆ ಮಾಹಿತಿ: ಐಎಂಡಿ ಮಾಹಿತಿ ಪ್ರಕಾರ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧರಣ ಮಳೆ ಸುರಿಯಲಿದೆ.

    ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅಂದಾಜಿಸಲಾಗಿದೆ. ಉಳಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

    ರಾಜ್ಯದ ಕರಾವಳಿ ಜಿಲ್ಲೆಯಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ ಜಿಲ್ಲೆಯಲ್ಲಿ ಸಾಧಾರಣ ಮಳೆ ಮತ್ತು ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ ಇದೆ.

    ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಎಂಡಿಸಿ) ಮುಂದಿನ 7 ದಿನಗಳ ಮಳೆ ಮುನ್ಸೂಚನೆಗಳನ್ನು ನೀಡಿದ್ದು, ರಾಜ್ಯದಾದ್ಯಂತ ಅಲ್ಲಲ್ಲಿ ತುಂತುರು ಮಳೆ, ನವೆಂಬರ್ 6 & 7 ರಂದು ಗುಡುಗು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

    ಕರಾವಳಿ ಕರ್ನಾಟಕದಲ್ಲಿ ನವೆಂಬರ್ 6, 7ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನವೆಂಬರ್ 6ರಂದು ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನವೆಂಬರ್ 6ರಂದು ದಕ್ಷಿಣ ಒಳನಾಡಿನಲ್ಲೂ ಯೊಲ್ಲೋ ಅಲರ್ಟ್ ನೀಡಲಾಗಿದೆ. ಮಂಗಳವಾರ ರಾಜ್ಯದಾದ್ಯಂತ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

    ಈ ವರ್ಷ ಪೂರ್ವ ಮುಂಗಾರು, ನೈಋತ್ಯ ಮುಂಗಾರು ಮಳೆ ಉತ್ತಮವಾಗಿ ಸುರಿದಿದೆ. ಅದರ ನಡುವೆಯೇ ಚಂಡಮಾರುತ ಪರಿಣಾಮ ಉತ್ತಮ ಮಳೆಯಾಗಿದೆ. ಎಲ್ಲಾ ಡ್ಯಾಂಗಳು ಭರ್ತಿಯಾಗಿದ್ದು, ಮಳೆ ಕಡಿಮೆಯಾದರೆ ಸಾಕು ಎಂದು ಜನರು ಹೇಳುತ್ತಿದ್ದಾರೆ. ಕರಾವಳಿ, ಮಲೆನಾಡು ಭಾಗದಲ್ಲಿ ಅಡಿಕೆ ಕಟಾವು ಪ್ರಾರಂಭವಾಗಿದ್ದು, ಈಗ ಮಳೆ ಬಂದರೆ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ.

    ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸೆಪ್ಟೆಂಬರ್ 30ರ ಬದಲು ಅಕ್ಟೋಬರ್ 15ರ ತನಕ ಮುಂದುವರೆದಿತ್ತು. ಈ ವರ್ಷದ ಹಿಂಗಾರು ಮಳೆ ಸಾಮಾನ್ಯವಾಗಿರುವ ನಿರೀಕ್ಷೆಯಿದ್ದು, ದಕ್ಷಿಣ ಒಳನಾಡಿನಲ್ಲಿ ಮಾತ್ರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

    ನೈಋತ್ಯ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ 14 ಸೆಂ.ಮೀ.ಮಳೆ ಅಧಿಕವಾಗಿ ಸುರಿದಿದೆ. ಅಕ್ಟೋಬರ್‌ನಿಂದ ಡಿಸೆಂಬರ್ ತನಕ ಹಿಂಗಾರು ಅವಧಿ ಆಗಿದ್ದು, ವಾಡಿಕೆಯಷ್ಟು ಮಳೆ ಸುರಿಯಲಿದೆ ಎಂದು ಅಂದಾಜಿಸಲಾಗಿದೆ. ಆದ್ದರಿಂದ ಡಿಸೆಂಬರ್ ತನಕ ರಾಜ್ಯದಲ್ಲಿ ಆಗಾಗ ಮಳೆ ತಪ್ಪಿದ್ದಲ್ಲ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search