ಶಿವಮೊಗ್ಗ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊರಗಿನವರಲ್ಲ ಎಂದು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಎಲ್ಲಾ ಸಮಸ್ಯೆಗಳನ್ನು ಚರ್ಚೆಯ ಮೂಲಕ ಇತ್ಯರ್ಥಪಡಿಸುವ ವಿಶ್ವಾಸ ವ್ಯಕ್ತಪಡಿಸಿದರು.
ವಿಜಯೇಂದ್ರ ಅವರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕೆಂದು ಸಲಹೆ ನೀಡಿದರು.
ಯತ್ನಾಳ್ ಅವರು ಹೊರಗಿನವರಲ್ಲ. ಕೆಲವು ಕಾರಣಗಳಿಂದ ಅವರು ಆಕ್ರೋಶಗೊಂಡಿರಬಹುದು. ಎಲ್ಲಾ ಕೂತು ಮಾತನಾಡೋಣ. ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗಬೇಕು ಎಂಬುದು ನನ್ನ ನಿರೀಕ್ಷೆ. ಇದು ವಿಜಯೇಂದ್ರ ಅವರ ನಿರೀಕ್ಷೆಯೂ ಹೌದು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಯಾವುದೇ ಲೋಪದೋಷಗಳಿದ್ದರೆ ಎದುರು ಬದುರು ಕುಳಿತು ಚರ್ಚಿಸಿ, ಇತ್ಯರ್ಥಪಡಿಸಿ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕು. ಇದು ನನ್ನ ಅಭಿಪ್ರಾಯ. ಇದಕ್ಕೆ ಎಲ್ಲರೂ ಸಹಕರಿಸುತ್ತಾರೆ ಎಂದು ಆಶಿಸುತ್ತೇನೆ ಎಂದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


