ಬೆಂಗಳೂರು: ವಕೀಲೆ ಜೀವಾ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿದೆ.
ಸಿಬಿಐ ತನಿಖೆಗೆ ಕೋರಿ ವಕೀಲರ ಸಂಘ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತು. ವಿನಾಯಕ್ ವರ್ಮ ಐಪಿಎಸ್, ಹಕೆಯ್ ಅಕ್ಷಯ್ ಮಂಚಿಂದಾ, ಐಪಿಎಸ್, ನಿಶಾ ಜೇಮ್ಸ್ ಐಪಿಎಸ್ ಸೇರಿದಂತೆ ಮೂವರು ಅಧಿಕಾರಿಗಳ ತಂಡದಿಂದ ಜೀವಾ ಆತ್ಮಹತ್ಯೆ ತನಿಖೆಗೆ ಎಸ್‌ಐಟಿ ಗೆ ಪೊಲೀಸ್ ಅಧಿಕಾರಿಗಳನ್ನು ನೇಮಿಸಿದೆ.
ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕು… ಡಿವೈಎಸ್‌ಪಿ ಕನಕಲಕ್ಷ್ಮಿ ವಿರುದ್ಧ 25 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟ ಆರೋಪವಿದೆ. ಲಂಚಕ್ಕೆ ಬೇಡಿಕೆಯಿಟ್ಟ ಬಗ್ಗೆ ಸಾಕ್ಷ್ಯಾಧಾರ ಕಂಡುಬಂದರೆ ತನಿಖೆ ನಡೆಸಬೇಕು,. ಕಾನೂನಿನ ಪ್ರಕ್ರಿಯೆ ಪಾಲಿಸಿ 3 ತಿಂಗಳಿನಲ್ಲಿ ತನಿಖೆ ಪೂರ್ಣಗೊಳಿಸಲು ಹೈಕೋರ್ಟ್ ಸೂಚನೆನೀಡಿದೆ. ತನಿಖೆಯ ಎಲ್ಲಾ ದಾಖಲೆಗಳನ್ನೂ ಎಸ್‌ಐಟಿಗೆ ಹಸ್ತಾಂತರಿಸಬೇಕು. ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ಒದಗಿಸಲು ಆದೇಶಿಸಲಾಗಿದೆ. ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ನೀಡಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


