Friday, November 6, 2026
spot_img
More
    spot_img
    HomeStateಸಿದ್ದರಾಮಯ್ಯ ಜೈಲಿಗೆ ಹೋದರೂ ಮುಖ್ಯಮಂತ್ರಿ ಸ್ಥಾನ ಬಿಡುವುದಿಲ್ಲ: ಬಿವೈ ವಿಜಯೇಂದ್ರ

    ಸಿದ್ದರಾಮಯ್ಯ ಜೈಲಿಗೆ ಹೋದರೂ ಮುಖ್ಯಮಂತ್ರಿ ಸ್ಥಾನ ಬಿಡುವುದಿಲ್ಲ: ಬಿವೈ ವಿಜಯೇಂದ್ರ

    ಬೆಂಗಳೂರು- ತಮ್ಮ ಭಂಡತನ ಮುಂದುವರಿಸಲು ನಿರ್ಧರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೆಹಲಿಯ ಹಿಂದಿನ ಮುಖ್ಯಮಂತ್ರಿ ಕೇಜ್ರಿವಾಲರಂತೆ ‘ಜೈಲಿಗೆ ಹೋದರೂ ಮುಖ್ಯಮಂತ್ರಿ ಗಾದಿ ಬಿಡುವುದಿಲ್ಲ’ ಎಂಬ ಶಪಥ ಕೈಗೊಂಡಂತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ,ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

    ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ದ ಪೋಸ್ಟ್ ಮಾಡಿರುವ ಅವರು, ನಿಶಕ್ತ ಎಐಸಿಸಿಯ ದೆಹಲಿ ಹೈಕಮಾಂಡ್ ಸಿದ್ದರಾಮಯ್ಯನವರ ಮುಂದೆ ಮಂಡಿಯೂರಿ ಕುಳಿತಿರುವುದು ಕರ್ನಾಟಕದ ದೌರ್ಭಾಗ್ಯವಲ್ಲದೇ ಬೇರೇನೂ ಅಲ್ಲ ಎಂದು ವ್ಯಂಗ್ಯವಾಡಿದ್ದಾರೆ.

    ಲೋಕಾಯುಕ್ತದ ತನಿಖೆಯ ದಿಕ್ಕು ಅನುಮಾನ ಮೂಡಿಸಿರುವ ನಡುವೆ ಜಾರಿ ನಿರ್ದೇಶನಾಲಯದಿಂದ ಹೊರಬಂದಿರುವ ವರದಿ ಮುಖ್ಯಮಂತ್ರಿಗಳ ಮುಖವಾಡ ಬಯಲು ಮಾಡಿದೆ. ಇಷ್ಟಾಗಿಯೂ ಅಧಿಕಾರದ ಕುರ್ಚಿಗೆ ಅಂಟಿಕುಳಿತಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಮುಡಾ ಅಕ್ರಮದಲ್ಲಿ ಮುಖ್ಯಮಂತ್ರಿಗಳ ಕುಟುಂಬಕ್ಕೆ ದೊರೆತಿದ್ದ 14 ನಿವೇಶನಗಳು ಹಾಗೂ ಸಾವಿರಾರು ನಿವೇಶನಗಳ ಲೂಟಿಕೋರತನದ ಹಗರಣದ ಹಿನ್ನಲೆ ಈ ಹಿಂದೆಯೂ ದಾಖಲೆಗಳ ಆಧಾರದ ಮೇಲೆ ಸಿದ್ದರಾಮಯ್ಯ ನವರ ಪಾತ್ರವನ್ನು ಸಾಕ್ಷಿಕರಿಸುತ್ತಿತ್ತು. ಇದರ ಆಧಾರದ ಮೇಲೆ ಉಚ್ಛ ನ್ಯಾಯಾಲಯ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯ ನಿರ್ಧಾರವನ್ನು ಎತ್ತಿ ಹಿಡಿದು ತನಿಖೆಗೆ ಮುಕ್ತ ಅವಕಾಶ ಕಲ್ಪಿಸಿ ಕೊಟ್ಟಿತ್ತು ಎಂದು ಹೇಳಿದ್ದಾರೆ.

    ಮುಡಾಗೆ ಸಾವಿರಾರು ಕೋಟಿ ರೂ ನಷ್ಟವಾಗಿರುವುದನ್ನು ಅಂದಿನ ಜಿಲ್ಲಾಧಿಕಾರಿಗಳೇ ಸರ್ಕಾರಕ್ಕೆ ಪತ್ರ ಬರೆದು ತಿಳಿಸಿದ್ದರು, ಈ ಹಿನ್ನೆಲೆಯಲ್ಲಿ ದಾಖಲಾದ ದೂರನ್ನು ಆಧರಿಸಿ ಜಾರಿ ನಿರ್ದೇಶನಾಲಯವು (ಇಡಿ)ನಡೆಸುತ್ತಿರುವ ತನಿಖೆ ವಾಸ್ತವ ಸ್ಥಿತಿಯ ಮೇಲೆ ಬೆಳಕು ಚೆಲ್ಲುತ್ತಿದೆ. ಇದರ ವಾಸನೆಯನ್ನು ಅರಿತೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಹೈಕಮಾಂಡ್ ಬೆದರಿಸಲು ಹಾಸನದಲ್ಲಿ ಸ್ವಾಭಿಮಾನಿ ಸಮಾವೇಶ ನಡೆಸಲು ಹೊರಟಿದ್ದರು. ಕಾಂಗ್ರೆಸ್ ವರಿಷ್ಠರಿಗೂ ಮುಖ್ಯಮಂತ್ರಿಗಳು ಭಂಡತನದಿಂದ ಅಧಿಕಾರದಲ್ಲಿ ಮುಂದುವರೆಯುವುದು ಬೇಕಿಲ್ಲ. ಈ ಕಾರಣಕ್ಕಾಗಿಯೇ ಹಾಸನದ ಸಿದ್ದರಾಮಯ್ಯನವರ ಸ್ವಪ್ರತಿಷ್ಠೆಯ ಸ್ವಾಭಿಮಾನಿ ಸಮಾವೇಶಕ್ಕೆ ಕಡಿವಾಣ ಹಾಕಿದ್ದಾರೆ ಎಂದು ವಿಜಯೇಂದ್ರ ಟಾಂಗ್ ಕೊಟ್ಟಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search