Thursday, March 26, 2026
spot_img
More
    spot_img
    HomeLatest newsಮಹಿಳಾ ನೌಕರರ ದಿನಾಚರಣೆಗೆ ದಿನಾಂಕ ನಿಗದಿ; ಘೋಷಣೆ ಮಾಡುವುದಾಗಿ ಸಿಎಂ ಭರವಸೆ

    ಮಹಿಳಾ ನೌಕರರ ದಿನಾಚರಣೆಗೆ ದಿನಾಂಕ ನಿಗದಿ; ಘೋಷಣೆ ಮಾಡುವುದಾಗಿ ಸಿಎಂ ಭರವಸೆ

    ಬೆಂಗಳೂರು: ಸರ್ಕಾರದ ಆಡಳಿತ ಯಂತ್ರದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಮಹಿಳಾ ನೌಕರರನ್ನು ಅಭಿನಂದಿಸಿ, ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದರು.

    ಅವರು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಬೆಂಗಳೂರು, ವತಿಯಿಂದ ಮಹಿಳಾ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

    ಮಹಿಳಾ ನೌಕರರಿಗೆ ಋತುಚಕ್ರ ರಜೆಯನ್ನು ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆಯನ್ನು ಮಂಜೂರು ಮಾಡಲು ಸರ್ಕಾರ ನಿರ್ಧರಿಸಿದೆ. ಸಂಘದ ಕಚೇರಿಯ ಕಾರ್ಯಚಟುವಟಿಕೆಗಳಿಗೆ ಬಾಲಭವನದಲ್ಲಿ ಸ್ಥಳಾವಕಾಶ ನೀಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರೊಂದಿಗೆ ಚರ್ಚಿಸಲಾಗಿದೆ. ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡಲಾಗುವುದು ಎಂದರು.

    ಲಿಂಗತಾರತಮ್ಯ ಹೋಗಲಾಡಿಸಲು ಸರ್ಕಾರ ಬದ್ಧ

    ಸರ್ಕಾರದ ಆಡಳಿತ ಯಂತ್ರದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಮಹಿಳಾ ನೌಕರರು ಪುರುಷರಿಗೆ ಸರಿಸಮನಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿ ಲಿಂಗತಾರತಮ್ಯ ಹೋಗಲಾಡಿಸಲು ಸರ್ಕಾರ ಬದ್ಧವಾಗಿದೆ. ಎಲ್ಲರನ್ನೂ ಸಮಾನವಾಗಿ ಕಾಣುವ ಬದ್ಧತೆ ನಮ್ಮ ಸರ್ಕಾರದ್ದಾಗಿದೆ ಎಂದರು.

    ಮೂಢನಂಬಿಕೆ ಹಾಗೂ ಅಂಧಶ್ರದ್ಧೆಗಳ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಿ

    ಹಿಂದಿನ ಕಾಲದಲ್ಲಿ ಮಹಿಳೆಯರು ಅಕ್ಷರ ಸಂಸ್ಕೃತಿಯನ್ನು ವಂಚಿತರಾಗಿದ್ದರು. ಸಂವಿಧಾನ ಜಾರಿಯ ನಂತರ ಎಲ್ಲರಿಗೂ ಶಿಕ್ಷಣ ಸೇರಿದಂತೆ ಸಮಾನ ಹಕ್ಕುಗಳನ್ನು ನೀಡಲಾಯಿತು. ಸ್ವಾತಂತ್ರ್ಯ ಬಂದಾಗ ದೇಶದಲ್ಲಿ ಸಾಕ್ಷರತೆಯ ಪ್ರಮಾಣ 10 ರಿಂದ ಶೇ.12 ರಷ್ಟಿತ್ತು. ಇಂದು ಈ ಪ್ರತಿಶತ ಸುಮಾರು 78 ಕ್ಕೆ ಏರಿದೆ. ಮಹಿಳೆಯರು ತಮ್ಮ ಮಕ್ಕಳ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಅವರಲ್ಲಿ ವೈಚಾರಿಕತೆ ಹಾಗೂ ವೈಜ್ಞಾನಿಕತೆಯನ್ನು ಬೆಳೆಸಬೇಕು. ಸಮಾಜದಲ್ಲಿ ಮೂಢನಂಬಿಕೆ ಹಾಗೂ ಅಂಧಶ್ರದ್ಧೆಗಳ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದರು.

    ಮಹಿಳೆಯರು ವೈಚಾರಿಕತೆ ಮತ್ತು ವೈಜ್ಞಾನಿಕತೆಯನ್ನು ಬೆಳೆಸಿಕೊಳ್ಳಬೇಕು

    ಮಹಿಳೆಯರು ವೈಚಾರಿಕತೆ ಮತ್ತು ವೈಜ್ಞಾನಿಕತೆಯನ್ನು ಬೆಳೆಸಿಕೊಳ್ಳಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದರು. ಸಾಧ್ಯವಾದ ಮಟ್ಟಿಗೆ ಮೂಢ ನಂಬಿಕೆಗಳು ಮತ್ತು ಅಂಧ ಶ್ರದ್ಧೆಗಳನ್ನ ದೂರ ಮಾಡುವಂಥ ಕೆಲಸ ಮಾಡಬೇಕು. ಮಕ್ಕಳಿಗೂ ಇದನ್ನು ಹೇಳಿಕೊಡಿ ಎಂದರು. ಆಗ ಮಾತ್ರ ಆರೋಗ್ಯಕರ, ಸಮಾನತೆಯ ಸಮಾಜ ನಿರ್ಮಾಣ ಸಾಧ್ಯ. ಸಂವಿಧಾನವೂ ಇದನ್ನೇ ಹೇಳುತ್ತದೆ. ಈ ಬಾರಿ ನಾನು ಮುಖ್ಯಮಂತ್ರಿಯಾದ ಬಳಿಕ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆಯನ್ನು ಓದಿಸಲಾಗುತ್ತಿದೆ. ನಮ್ಮ ಸಮಾಜದಲ್ಲಿ ಅನೇಕ ಜಾತಿ, ಧರ್ಮಗಳಿವೆ. ಯಾವುದೇ ಕಾರಣಕ್ಕೂ ಮಕ್ಕಳಿಗೆ ಜಾತಿಯನ್ನು ಮುಂದಿಟ್ಟುಕೊಂಡು ಜಾತೀಯತೆಯನ್ನು ತುಂಬುವ ಕೆಲಸ ಮಾಡಬಾರದು. ಶಿಕ್ಷಣ ನೀಡುವುದು ಜಾತಿ ವ್ಯವಸ್ಥೆ ಹೋಗಬೇಕೆನ್ನುವ ಕಾರಣಕ್ಕೆ. ಅದರ ಉದ್ದೇಶ ಸಫಲವಾಗಬೇಕು ಎಂದರು. ವೈದ್ಯರು, ವಿಜ್ಞಾನಿಗಳೂ ಸೇರಿದಂತೆ ವಿದ್ಯಾವಂತರು ಕೂಡ ಮೂಢನಂಬಿಕೆಗಳನ್ನು ಉಳ್ಳವರಾಗಿದ್ದಾರೆ. ಮಕ್ಕಳನ್ನು ಮೂಢನಂಬಿಕೆಗಳಿಂದ ದೂರ ಇಡಬೇಕು ಹಾಗೂ ಮಹಿಳೆಯರು ಹಾಗೂ ಮಕ್ಕಳು ಜಾತ್ಯತೀತವಾಗಿರಬೇಕು ಎಂದರು.

    ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾಗಬೇಕು

    ಮಹಿಳೆಯರ ಸಬಲೀಕರಣವಾಗಬೇಕು ಎಂಬ ಉದ್ದೇಶದಿಂದ 3.5 ಕೋಟಿ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತವಾಗಿ ಓಡಾಡುತ್ತಿದ್ದಾರೆ. ಇದನ್ನು ಸಾಮಾಜಿಕ ಬಂಡವಾಳ ಎಂದು ಕರೆಯುತ್ತೇವೆ. ಉಳಿತಾಯವಾಗುವ ಹಣವನ್ನು ಮಕ್ಕಳ ಶಿಕ್ಷಣ ಮುಂತಾದವುಕ್ಕೆ ಬಳಸಿಕೊಳ್ಳಲಾಗುತ್ತದೆ. ಆರನೇ ಮತ್ತು ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದು ನಮ್ಮ ಸರ್ಕಾರವೇ ಎಂದ ಮುಖ್ಯಮಂತ್ರಿಗಳು, ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾಗಬೇಕು. ಸ್ವಾತಂತ್ರ್ಯ ದೊರಕಿದ್ದು ಯಶಸ್ವಿಯಾಗಲು ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು ಎಂದು ಡಾ: ಬಿ.ಆರ್.ಅಂಬೇಡ್ಕರ್ ಹೇಳಿದ್ದರು. ಸರ್ಕಾರದ ಕೆಲಸಗಳಲ್ಲಿ ದಕ್ಷತೆ ಹೆಚ್ಚಾಗಲಿ ಎಂದರು.

    ಬಾಡಿಗೆದಾರರಿಗೆ ಬಿಗ್ ರಿಲೀಫ್! ಇನ್ಮುಂದೆ 10 ತಿಂಗಳ ಠೇವಣಿ ಇಲ್ಲ, 2 ತಿಂಗಳ ಅಡ್ವಾನ್ಸ್ ಮಾತ್ರ: ಹೊಸ ನಿಯಮಗಳು ಜಾರಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬ್ರೇಕಿಂಗ್ರಾ! ಮನವಮಿ ಹಬ್ಬಕ್ಕೆ ಮಾರುಕಟ್ಟೆ ಬಂದ್ ಆಗುತ್ತಾ? ಹೂಡಿಕೆದಾರರಿಗೆ ಕ್ಲಿಯರ್ ಮಾಹಿತಿ!

    “ಸ್ಟಾಕ್ ಮಾರ್ಕೆಟ್ ಹಾಲಿಡೇ 2026” ಇದೀಗ ಹೂಡಿಕೆದಾರರಲ್ಲಿ ದೊಡ್ಡ ಗೊಂದಲ ಮೂಡಿಸಿದೆ. ರಾಮನವಮಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ಅಥವಾ ಶುಕ್ರವಾರ ಷೇರು ಮಾರುಕಟ್ಟೆ ಬಂದ್ ಆಗುತ್ತದೆಯಾ? ಎಂಬ ಪ್ರಶ್ನೆ ಟ್ರೇಡರ್‌ಗಳ ನಡುವೆ ಭಾರೀ...

    ಬ್ರೇಕಿಂಗ್! ಮಾರುಕಟ್ಟೆ ರಾಕೆಟ್—ಸೆನ್ಸೆಕ್ಸ್ 1300 ಪಾಯಿಂಟ್ ಜಿಗಿತ! ರೂಪಾಯಿ ಕುಸಿತ, ಚಿನ್ನ ಏರಿಕೆ… ಏನಿದು ಮಿಶ್ರ ಸಿಗ್ನಲ್?

    “ಸ್ಟಾಕ್ ಮಾರ್ಕೆಟ್ 24 ಮಾರ್ಚ್ 2026” ಹೂಡಿಕೆದಾರರಿಗೆ ಒಂದೇ ದಿನದಲ್ಲಿ ರೋಲರ್ ಕೋಸ್ಟರ್ ಅನುಭವ ನೀಡಿದೆ! ಒಂದೆಡೆ ಷೇರು ಮಾರುಕಟ್ಟೆ ಭರ್ಜರಿ ಏರಿಕೆ ಕಂಡಿದ್ದರೆ, ಇನ್ನೊಂದೆಡೆ ರೂಪಾಯಿ ಕುಸಿತ ಮತ್ತು ಚಿನ್ನದ ಬೆಲೆ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading