Sunday, November 1, 2026
spot_img
More
    spot_img
    HomeTop Storyಚೀನಾದಲ್ಲಿ ಹೊಸ ವೈರಸ್:‌ ಭಯವಿಲ್ಲ ಎನ್ನುತ್ತಲೇ ಎಚ್ಚೆತ್ತುಕೊಂಡ ಇತರೆ ದೇಶಗಳು

    ಚೀನಾದಲ್ಲಿ ಹೊಸ ವೈರಸ್:‌ ಭಯವಿಲ್ಲ ಎನ್ನುತ್ತಲೇ ಎಚ್ಚೆತ್ತುಕೊಂಡ ಇತರೆ ದೇಶಗಳು

    ನವದೆಹಲಿ: ಜಗತ್ತಿಗೆ ಕೋವಿಡ್-19 ಎನ್ನುವ ವೈರಸ್ ಕೊಟ್ಟು ಜಗತ್ತನ್ನೇ ಕಷ್ಟಕ್ಕೆ ಸಿಲುಕುವಂತೆ ಮಾಡಿದ್ದ ಚೀನಾದಲ್ಲಿ ಇದೀಗ ಹೊಸ ವೈರಸ್ ಕಾಣಿಸಿಕೊಂಡಿದ್ದು ಚೀನಾದಲ್ಲಿ ತುರ್ತು ಪರಿಸ್ಥಿತಿ ಉಂಟಾಗುವಂತೆ ಮಾಡಿದೆ.

    ಚೀನಾದ ಪರಿಸ್ಥಿತಿ ನೋಡಿ ಇತರೆ ದೇಶಗಳು ಕೂಡ ಆತಂಕಗೊಂಡಿವೆ. ಚೀನಾದಲ್ಲಿ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ ಭಾರತದಲ್ಲಿ ಕೂಡ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ಎಲ್ಲಾ ಸಿದ್ದತೆ ಮಾಡಿಕೊಂಡಿದೆ.

    ಚೀನಾದಲ್ಲಿ ಕಾಣಿಸಿಕೊಂಡ ಎಚ್‍ಎಂಪಿವಿ (ಮಾನವ ಮೆಟಾಪ್ನ್ಯೂಮೋವೈರಸ್) ಹರಡುತ್ತಿದ್ದು ಭಾರತೀಯರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ. ಉಸಿರಾಟಕ್ಕೆ ಸಂಬಂಧಿಸಿದ ಕಾಯಿಲೆಗಳನ್ನು ನಿಭಾಯಿಸಲು ನಾವು ಸಿದ್ದವಾಗಿದ್ದೇನೆ, ಚೀನಾದಲ್ಲಿ ಇರುವ ಪರಿಸ್ಥಿತಿ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದೆ.

    ಉಸಿರಾಟಕ್ಕೆ ಸಂಬಂಧಿಸಿದ ಕಾಯಿಲೆಗಳನ್ನು ನಿಭಾಯಿಸಲು ನಾವು ಸಿದ್ದವಾಗಿದ್ದೇನೆ, ಚೀನಾದಲ್ಲಿ ಇರುವ ಪರಿಸ್ಥಿತಿ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದೆ. ಕಳೆದ ಕೆಲವು ವಾರಗಳಲ್ಲಿ ಚೀನಾದಲ್ಲಿ ಉಸಿರಾಟದ ಕಾಯಿಲೆ ಪ್ರಕರಣಗಳು ಹೆಚ್ಚುತ್ತಿರುವ ನಡುವೆ, ದೆಹಲಿಯಲ್ಲಿ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ ಎಂದು ಕೇಂದ್ರ ಮಾಹಿತಿ ನೀಡಿದೆ.

    ವಿಶ್ವ ಆರೋಗ್ಯ ಸಂಸ್ಥೆ , ವಿಪತ್ತು ನಿರ್ವಹಣೆ ಕೋಶ, ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮ , ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಓಅಆಅ), ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ , ತುರ್ತು ವೈದ್ಯಕೀಯ ಪರಿಹಾರ ಹಲವಾರು ತಜ್ಞರು ದೆಹಲಿಯ ಏಮ್ಸ್ ಸೇರಿದಂತೆ ಹಲವು ಆಸ್ಪತ್ರೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

    ಆತಂಕಪಡುವ ಅಗತ್ಯವಿಲ್ಲ ಎಚ್‍ಎಂಪಿವಿ ಬಗ್ಗೆ ಸಭೆ ನಡೆದ ಬಳಿಕ ಪ್ರತಿಕ್ರಿಯೆ ನೀಡಿ ಸಚಿವಾಲಯ, ಚೀನಾದಲ್ಲಿ ಈಗ ಇರುವ ಪರಿಸ್ಥಿತಿ ವಿಶೇಷವೇನಲ್ಲ, ಈ ಕಾಲದಲ್ಲಿ ಅಲ್ಲಿ ಉಸಿರಾಟ ಆರೋಗ್ಯ ಸಮಸ್ಯೆ ಸಾಮಾನ್ಯ ಎನ್ನುವ ಅಭಿಪ್ರಾಯಕ್ಕೆ ಬರಲಾಗಿದೆ. ಇನ್ಫ್ಲುಯೆನ್ಸ ವೈರಸ್, ಆರ್ ಎಸ್ವಿ, ಎಚ್‍ಎಂಪಿವಿ ವೈರಸ್ಗಳು ಸಾಮಾನ್ಯ ಎಂದು ಸಚಿವಾಲಯ ತಿಳಿಸಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search