ಬೆಂಗಳೂರು: ಬೆಳಗಾವಿ ಪೊಲೀಸರು ತಮ್ಮ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿರುವ ವಿಧಾನ ಪರಿಷತ್ ಸದಸ್ಯಸಿಟಿ ರವಿ, ರಾಷ್ತ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.
ಮಾನವಹಕ್ಕುಗಳ ಆಯೋಗಕ್ಕೆ ಇ-ಮೇಲ್ ಮೂಲಕ 13 ಪುಟಗಳ ದೂರನ್ನು ಸಿಟಿ ರವಿ ಸಲ್ಲಿಸಿದ್ದು, ಬಂಧನದ ವೇಳೆ ಪೊಲೀಸ್ ದೌರ್ಜನ್ಯ, ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ ಆರೋಪಿಸಿದ್ದಾರೆ.
ಕಾನೂನು ಬಾಹೀರ ಬಂಧನ, ಕಿಡ್ನಾಪ್, ನಕಲಿ ಎಫ್ ಐ ಆರ್, ಕಸ್ಟಡಿಯಲ್ಲಿ ಟಾರ್ಚರ್ ನೀಡದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇನ್ನು ತಮ್ಮ ತಲೆಗೆ ರಕ್ತ ಬಂದಿರುವ ವಿಚಾರ ಕೂಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಅಂದು ನಡೆದ ಘಟನೆ ಬಗ್ಗೆ ಸಂಪೂರ್ಣವಾಗಿ ವಿವರಿಸಿ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಘಟನೆಗೆ ಕಾರಣರಾದವರ ಹೆಸರನ್ನು ಉಲ್ಲೇಖಿಸಿದ್ದಾರೆ. ಘಟನೆಗೆ ನೇರವಾಗಿ ಕಾರಣವಾದವರು ಮತ್ತು ಪರೋಕ್ಷವಾಗಿ ಕಾರಣರಾದವರ ಹೆಸರು ಉಲ್ಲೇಖಿಸಿದ್ದಾರೆ.
DG & iGP, ಬೆಳಗಾವಿ ಪೊಲೀಸ್ ಆಯುಕ್ತರಾದ ಲಾಡಾ ಮಾರ್ಟೀನ್, SP ಭೀಮಾಶಂಕರ್ ಗುಳೇದ್ ನೇರವಾಗಿ ಘಟನೆಗೆ ಕಾರಣ ಎಂದು ಸಿಟಿ ರವಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹಸಚಿವ ಡಾ. ಜಿ. ಪರಮೇಶ್ವರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ದೂರಿನಲ್ಲಿ ಡಿಸಿಎಂ ಡಿಕೆ. ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಬಸವನಗೌಡ ಬಾದರ್ಲಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಅವರ ಪಿಎಗಳು ಹಾಗೂ ಹಿರೇಬಾಗೇವಾಡಿ ಸಿಪಿಐ ರಾಜು ಪಾಟೀಲ್ ಹೆಸರು ಕೂಡ ಉಲ್ಲೇಖಿಸಿದ್ದಾರೆ.
ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಹಿಂಸೆ ತಡೆಯುವಲ್ಲಿ ವಿಫಲರಾಗಿದ್ದಾರೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಡಿಜಿಪಿ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಆರೋಪ ಮಾಡಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


