Monday, November 2, 2026
spot_img
More
    spot_img
    HomeTop Storyಕೆಎಸ್‌ಆರ್‌ಟಿಸಿ ಟಿಕೆಟ್‌ ದರ ಏರಿಕೆ: ಮೊದಲ ದಿನ ಹೇಗಿತ್ತು ಸಾರ್ವಜನಿಕರ ಪ್ರತಿಕ್ರಿಯೆ?

    ಕೆಎಸ್‌ಆರ್‌ಟಿಸಿ ಟಿಕೆಟ್‌ ದರ ಏರಿಕೆ: ಮೊದಲ ದಿನ ಹೇಗಿತ್ತು ಸಾರ್ವಜನಿಕರ ಪ್ರತಿಕ್ರಿಯೆ?

    ಬೆಂಗಳೂರು: ಆರ್ಥಿಕ ನಷ್ಟದ ಸುಳಿಗೆ ಸಿಲುಕಿರುವ ಸಾರಿಗೆ ನಿಗಮಗಳನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಏಕಾಏಕಿ ಶೇ.15ರಷ್ಟು ಬಸ್ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಿರುವ ಸರ್ಕಾರದ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.


    ಒಂದು ಕಡೆ ಉಚಿತವಾಗಿ ಗ್ಯಾರಂಟಿ ಕೊಡುವ ಸರ್ಕಾರ ಮತ್ತೊಂದು ಕಡೆ ಅದೇ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಹಾವು ಸಾಯಬಾರದು, ಕೋಲು ಮುರಿಯಬಾರದು ಎಂಬಂತಾಗಿದೆ ಸರ್ಕಾರದ ಧೋರಣೆ ಎಂದು ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.


    ನಾವೇನು ಉಚಿತ ಗ್ಯಾರಂಟಿಗಳನ್ನು ಕೊಡಿ ಎಂದು ಅಂಗಲಾಚಿದ್ದೆವಾ? ಚುನಾವಣೆಯಲ್ಲಿ ಗೆಲ್ಲಲು ಇವರಿಗೆ ಭಾಗ್ಯಗಳು ಬೇಕಾಗಿತ್ತು. ಈಗ ಅವುಗಳನ್ನು ಮುಂದುವರೆಸಲು ಮೀನಾಮೇಷ ಎಣಿಸುತ್ತಿದೆ. ಹೀಗಾಗಿ ಸಂಕಷ್ಟಕ್ಕೆ ಸಿಲುಕಿರುವ ನಮಗೆ ದರ ಏರಿಕೆ ಭಾಗ್ಯ ನೀಡುತ್ತಿದೆ ಎಂದು ಪುರುಷ ಪ್ರಯಾಣಿಕರು ಎಲ್ಲೆಡೆ ಆಕ್ರೋಶ ಹೊರ ಹಾಕುತ್ತಿದ್ದಾರೆ.


    ಈ ಪುರುಷಾರ್ಥಕ್ಕೆ ಸರ್ಕಾರ ಗ್ಯಾರಂಟಿ ಭಾಗ್ಯಗಳನ್ನು ನಿಲ್ಲಿಸುವುದೇ ಲೇಸು. ಈಗಾಗಲೇ ಕಳೆದ ಬಜೆಟ್‍ನಲ್ಲಿ ಡೀಸೆಲ್,ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಳ ಮಾಡಲಾಗಿತ್ತು. ಜೊತೆಗೆ ಹಾಲಿನ ದರ, ವಿದ್ಯುತ್ ದರ ಪರಿಷ್ಕರಣೆ ಮಾಡಲಾಗಿದೆ.


    ಒಂದು ಕಡೆ ಸರ್ಕಾರ ಎಲ್ಲವನ್ನೂ ಉಚಿತವಾಗಿ ಕೊಟ್ಟಿದ್ದೇವೆ. ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ ಎಂದು ಹೇಳುತ್ತಿದೆ. ಮತ್ತೊಂದು ಕಡೆ ಅದೇ ಜನರ ಜೇಬಿನಿಂದಲೇ ಬೆಲೆ ಏರಿಸುವ ಮೂಲಕ ಕಿತ್ತುಕೊಳ್ಳುತ್ತದೆ. ಇದನ್ನು ಕೊಟ್ಟರೂ ಸರಿಯೇ ಬಿಟ್ಟರೂ ಸರಿಯೇ ಎಂದು ಪ್ರಯಾಣಿಕರು ಶಾಪ ಹಾಕುತ್ತಿದ್ದಾರೆ.


    ಕೇವಲ ಸಾರ್ವಜನಿಕರಿಂದ ಮಾತ್ರವಲ್ಲದೆ ಸರ್ಕಾರದ ಕ್ರಮವನ್ನು ವಿವಿಧ ರಾಜಕೀಯ ಮುಖಂಡರು ಕೂಡ ಖಂಡಿಸಿದ್ದಾರೆ. ಬಿಜೆಪಿ, ಜೆಡಿಎಸ್, ಆಮ್ ಆದಿ, ಕೆಆರ್‍ಎಸ್ ರೈತ ಸಂಘಟನೆಗಳು, ಎಡಪಕ್ಷಗಳು ಸೇರಿದಂತೆ ವಿವಿಧ ಸಂಘಟನೆಗಳು ಕೂಡ ಸರ್ಕಾರದ ಬೆಲೆ ಪರಿಷ್ಕರಣೆಗೆ ಕಿಡಿಕಾರಿದ್ದಾರೆ.


    ಅಧಿಕೃತ ವಿರೋಧ ಪಕ್ಷವಾದ ಬಿಜೆಪಿ ರಾಜ್ಯದೆಲ್ಲೆಡೆ ಬಸ್ ಪ್ರಯಾಣ ದರ ಏರಿಕೆ ವಿರೋಧಿಸಿ ಪ್ರತಿಭಟನೆಗೆ ಕರೆ ಕೊಟ್ಟಿದೆ. ಇನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಕೂಡ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಿರಂತರವಾಗಿ ಬೆಲೆ ಹೆಚ್ಚಳ ಮಾಡುವುದಾದರೆ ನೀವು ಭಾಗ್ಯಗಳನ್ನು ನಿಲ್ಲಿಸುವುದೇ ಸರಿಯಾದ ಕ್ರಮ ಎಂದು ಸಿಡಿಮಿಡಿಗೊಂಡರು.


    ಕಾಂಗ್ರೆಸ್ ಸರ್ಕಾರದಿಂದ ಎತ್ತಿನಬಂಡಿ ಗ್ಯಾರಂಟಿ, ಸರ್ಕಾರ ಜಾಲಿ ಜಾಲಿ-ಜನರ ಜೇಬು ಖಾಲಿ ಖಾಲಿ ಎಂದು ಆಮ್ ಆದಿ ಪಾರ್ಟಿ ವಿಶೇಷವಾಗಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ವಿರುದ್ಧ ಆಕ್ಷೇಪ ಎತ್ತಿದೆ.


    ಭ್ರಷ್ಟಾಚಾರವನ್ನು ನಿಲ್ಲಿಸದೆ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡದೆ ವಿಫಲವಾಗಿದೆ. ಹೀಗಾಗಿ ಪದೇ ಪದೇ ದರ ಏರಿಕೆ ಮಾಡುತ್ತಿದೆ ಎಂದು ಕಿಡಿಕಾರಿದೆ.


    ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ 2 ಬಜೆಟ್‍ಗಳಲ್ಲಿ 2 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಈ ದುಡ್ಡು ಯಾರ ಜೇಬು ಸೇರುತ್ತಿದೆ ಎಂಬುದನ್ನು ಜನತೆಗೆ ತಿಳಿಸಬೇಕು. ಈಗಾಗಲೇ ಸ್ಟ್ಯಾಂಪ್ ಡ್ಯೂಟಿ, ಅಬಕಾರಿ ಸುಂಕ, ವಿದ್ಯುತ್ ದರ, ಹಾಲಿನ ದರ ಎಲ್ಲವನ್ನು ಗಗನಕ್ಕೆ ಮುಟ್ಟಿಸಿದ್ದಾರೆ. ಈಗ ಬಸ್ ದರ ಏರಿಸಿದ್ದಾರೆ. ಮುಂದಿನ ದಿನಗಳಲ್ಲಿ ನೀರಿನ ದರವನ್ನು ಏರಿಸುತ್ತಿದ್ದಾರೆ. ಈ ರೀತಿಯ ಜನ ಪರ ಕಾಳಜಿ ಇಲ್ಲದ ಕಾಂಗ್ರೆಸ್ ಸರ್ಕಾರವು ಆರ್ಥಿಕ ದಿವಾಳಿಯಾಗುವ ಹಂತಕ್ಕೆ ತಲುಪಿರುವ ಅನುಮಾನ ಜನತೆಯಲ್ಲಿ ಕಾಡುತ್ತಿದೆ. ಬಸ್ ದರ ಏರಿಕೆಯನ್ನು ಈ ಕೂಡಲೇ ಹಿಂಪಡೆಯದಿದ್ದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಎಪಿ ಎಚ್ಚರಿಕೆ ಕೊಟ್ಟಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search