Post Office Jobs 2025 — ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದಾರೆ.ಭಾರತ ದೇಶಾದ್ಯಂತ ವಿವಿಧ ವಲಯಗಳಲ್ಲಿ ಒಟ್ಟು 25 ಹುದ್ದೆಗಳು ಖಾಲಿ ಇವೆ. ಯಾವ ವಲಯಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಅರ್ಜಿ ಸಲ್ಲಿಕೆಗೆ ಬೇಕಾಗಿರುವ ವಿವಿಧ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ನೀಡಲಾಗಿದೆ.ಒಟ್ಟು 25 ಹುದ್ದೆಗಳು ಖಾಲಿ ಇದ್ದು, ವಲಯವಾರು ಖಾಲಿ ಹುದ್ದೆಗಳ ವಿಂಗಡಣೆ ಈ ಕೆಳಗಿನಂತಿದೆ.
- ಸೆಂಟ್ರಲ್ ರಿಜನ್ – 01 ಹುದ್ದೆ
- ಚೆನ್ನೈ – 15 ಹುದ್ದೆಗಳು
- ದಕ್ಷಿಣ ವಲಯ – 04 ಹುದ್ದೆಗಳು
- ಪಶ್ಚಿಮ ವಲಯ – 05 ಹುದ್ದೆಗಳು
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು :
ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು. ಲಘು ಮತ್ತು ಭಾರಿ ವಾಹನ ಪರವಾನಗಿ ಹೊಂದಿರಬೇಕು.
ವಯೋಮಿತಿ ಅರ್ಹತೆ — ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು 56 ವರ್ಷದ ಕೆಳಗಿರಬೇಕು.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ಸಂಬಳ — ಮೂಲ ವೇತನ 19,900ರೂ.
ಅರ್ಜಿ ಹೇಗೆ ಸಲ್ಲಿಸುವುದು?
ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ನೀವು ಅರ್ಹತೆ ಹೊಂದಿದ್ದಲ್ಲಿ, ಕೆಳಗೆ ನೀಡಿರುವ ಅರ್ಜಿ ಫಾರಂ ಡೌನ್ಲೋಡ್ ಮಾಡಿಕೊಂಡು ಸರಿಯಾದ ಮಾಹಿತಿಯನ್ನು ಭರ್ತಿ ಮಾಡಿ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಿ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


