ನವದೆಹಲಿ: ಇಂದು (ಫೆಬ್ರವರಿ 5) ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ನಡೆದಿದ್ದು, ಹಲವು ವಿವಾದ, ಗೊಂದಲಗಳ ನಡುವೆಯೇ ಎಲ್ಲಾ 70 ಕ್ಷೇತ್ರಗಳಲ್ಲೂ 6.30ಕ್ಕೆ ಅಂತ್ಯಗೊಂಡಿದೆ. ಒಟ್ಟು 699 ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ದಾಖಲಾಗಿದೆ. ಇದೇ ತಿಂಗಳ 8ರಂದು ಫಲಿತಾಂಶ ಹೊರಬೀಳಲಿದೆ.
ಇನ್ನು ಅತ್ತ ಮತದಾನ ಪ್ರಕ್ರಿಯೆ ಮುಕ್ತಾಯಗೊಳ್ಳುತ್ತಿದ್ದಂತೆ ಇತ್ತ ವಿವಿಧ ಸಂಸ್ಥೆಗಳು ದೆಹಲಿ ವಿಧಾನಸಭಾ ಚುನಾವಣೋತ್ತರ ಸಮೀಕ್ಷೆ ಬಿಡುಗಡೆಗೊಳಿಸಿವೆ. ಒಟ್ಟು 70 ಕ್ಷೇತ್ರಗಳ ಪೈಕಿ 36 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಪಕ್ಷ ಅಧಿಕಾರ ಹಿಡಿಯಲಿದೆ.
ಈ ಪೈಕಿ ದೈನಿಕ್ ಭಾಸ್ಕರ್ ಸಂಸ್ಥೆಯ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಬಿಜೆಪಿ 23ರಿಂದ 27 ಸ್ಥಾನಗಳಲ್ಲಿ, ಎಎಪಿ 43ರಿಂದ 47 ಸ್ಥಾನಗಳಲ್ಲಿ ಹಾಗೂ ಕಾಂಗ್ರೆಸ್ 0-1 ಸ್ಥಾನದಲ್ಲಿ ಬಹುಮತ ಸಾಧಿಸಲಿದೆ ಎಂದು ತಿಳಿಸಿದೆ. ಈ ಮೂಲಕ ಎಎಪಿ ಹ್ಯಾಟ್ರಿಕ್ ಗೆಲುವು ಸಾಧಿಸಲಿದೆ ಎಂದು ದೈನಿಕ್ ಭಾಸ್ಕರ್ ವರದಿ ಮಾಡಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


