Sunday, November 1, 2026
spot_img
More
    spot_img
    HomeTop StoryDelhi Election Exit Poll: ಎಎಪಿಗೆ ಸೋಲು, ಈ ಪಕ್ಷದ್ದೇ ಗೆಲುವು ಎಂದ ಪ್ರಸಿದ್ಧ ʼಚಾಣಕ್ಯʼ...

    Delhi Election Exit Poll: ಎಎಪಿಗೆ ಸೋಲು, ಈ ಪಕ್ಷದ್ದೇ ಗೆಲುವು ಎಂದ ಪ್ರಸಿದ್ಧ ʼಚಾಣಕ್ಯʼ ಸಮೀಕ್ಷೆ

    ನವದೆಹಲಿ: ಇಂದು (ಫೆಬ್ರವರಿ 5) ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ನಡೆದಿದ್ದು, ಹಲವು ವಿವಾದ, ಗೊಂದಲಗಳ ನಡುವೆಯೇ ಎಲ್ಲಾ 70 ಕ್ಷೇತ್ರಗಳಲ್ಲೂ 6.30ಕ್ಕೆ ಅಂತ್ಯಗೊಂಡಿದೆ. ಒಟ್ಟು 699 ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ದಾಖಲಾಗಿದೆ. ಇದೇ ತಿಂಗಳ 8ರಂದು ಫಲಿತಾಂಶ ಹೊರಬೀಳಲಿದೆ.

    ಇನ್ನು ಅತ್ತ ಮತದಾನ ಪ್ರಕ್ರಿಯೆ ಮುಕ್ತಾಯಗೊಳ್ಳುತ್ತಿದ್ದಂತೆ ಇತ್ತ ವಿವಿಧ ಸಂಸ್ಥೆಗಳು ದೆಹಲಿ ವಿಧಾನಸಭಾ ಚುನಾವಣೋತ್ತರ ಸಮೀಕ್ಷೆ ಬಿಡುಗಡೆಗೊಳಿಸಿವೆ. ಒಟ್ಟು 70 ಕ್ಷೇತ್ರಗಳ ಪೈಕಿ 36 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಪಕ್ಷ ಅಧಿಕಾರ ಹಿಡಿಯಲಿದೆ.

    ಈ ಪೈಕಿ ಚಾಣಕ್ಯ ಸಂಸ್ಥೆಯ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಬಿಜೆಪಿ 39ರಿಂದ 44 ಸ್ಥಾನಗಳಲ್ಲಿ, ಎಎಪಿ 25ರಿಂದ 28 ಸ್ಥಾನಗಳಲ್ಲಿ ಹಾಗೂ ಕಾಂಗ್ರೆಸ್‌ 0-1 ಸ್ಥಾನದಲ್ಲಿ ಬಹುಮತ ಸಾಧಿಸಲಿದೆ ಎಂದು ತಿಳಿದುಬಂದಿದೆ. ಈ ಮೂಲಕ ಬಿಜೆಪಿ ಅಧಿಕಾರದ ಚುಕ್ಕಾಣೆ ಹಿಡಿಯಲಿದೆ ಎಂದು ಜನಪ್ರಿಯ ಚಾಣಕ್ಯ ವರದಿ ಮಾಡಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search