ಇದೇ ಫೆಬ್ರವರಿ 19ರಿಂದ ಬಹು ನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳು ಸೆಣಸಾಟ ನಡೆಸಲಿವೆ.
ಭಾರತದ ಪಂದ್ಯಗಳು ಮಾತ್ರ ಯುಎಇಯಲ್ಲಿ ನಡೆಯಲಿದ್ದು, ಉಳಿದ ಸಂಪೂರ್ಣ ಟೂರ್ನಿ ಪಾಕಿಸ್ತಾನದಲ್ಲಿ ನಡೆಯಲಿದೆ.
ಟೂರ್ನಿ ಆರಂಭಕ್ಕೆ ಇನ್ನು 15 ದಿನಗಳು ಮಾತ್ರ ಬಾಕಿ ಉಳಿದಿದ್ದು, ಎಲ್ಲಾ ತಂಡಗಳು ಸಕಲ ಸಿದ್ಧತೆ ನಡೆಸುತ್ತಿವೆ. ಹೀಗಿರುವಾಗ ಆಸ್ಟ್ರೇಲಿಯಾ ತಂಡದ ಕುರಿತಾಗಿ ಸುದ್ದಿಯೊಂದನ್ನು ಇಎಸ್ಪಿಎನ್ ಕ್ರಿಕ್ಇನ್ಫೋ ಹಂಚಿಕೊಂಡಿದ್ದು, ಪ್ಯಾಟ್ ಕಮಿನ್ಸ್ ಟೂರ್ನಿಯಲ್ಲಿ ಕಣಕ್ಕಿಳಿಯುವುದು ಬಹುತೇಕ ಅನುಮಾನ ಎಂದು ತಿಳಿಸಿದೆ.
ಮೊಣಕಾಲು ನೋವಿನಿಂದ ಬಳಲುತ್ತಿರುವ ಕಾರಣ ʼಟ್ರೋಫಿ ಕಿಂಗ್ʼ ಕಮಿನ್ಸ್ ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆ ಅಧಿಕವಾಗಿದ್ದು, ಸ್ಟೀವ್ ಸ್ಮಿತ್ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


