Thursday, September 3, 2026
spot_img
More
    spot_img
    HomeTop Storyಔಷಧಿಯ ಸಸ್ಯಕಾಶಿ ಕಪ್ಪತ್ತಗುಡ್ಡ ಬೆಂಕಿಗಾಹುತಿ: ನೂರಾರು ಹೆಕ್ಟೇರ್‌ ಅರಣ್ಯ ಸುಟ್ಟು ಕರಕಲು

    ಔಷಧಿಯ ಸಸ್ಯಕಾಶಿ ಕಪ್ಪತ್ತಗುಡ್ಡ ಬೆಂಕಿಗಾಹುತಿ: ನೂರಾರು ಹೆಕ್ಟೇರ್‌ ಅರಣ್ಯ ಸುಟ್ಟು ಕರಕಲು

    ಗದಗ: ಉತ್ತರ ಕರ್ನಾಟಕದ ಸೈಹಾದ್ರಿ, ಆಯುರ್ವೇದ ಔಷಧಿಯ ಸಸ್ಯಕಾಶಿ, ದೇಶದಲ್ಲಿಯೇ ಶುದ್ಧ ಗಾಳಿಗೆ ಹೆಸರಾದ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

    Advertisement

    ಬೇಸಿಗೆ ಆರಂಭಕ್ಕೂ ಮುನ್ನೆ ಕಪ್ಪತ್ತಗುಡ್ಡ ಬೆಂಕಿಗಾಹುತಿಯಾಗಿದ್ದು, ಮುಂಡರಗಿ ತಾಲ್ಲೂಕಿನ ಡೋಣಿ ಗ್ರಾಮದ ಬಳಿ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡಿತ್ತು.

    ಡೋಣಿ ಬಳಿಯ ನಂದಿವೇರಿ ಮಠದ ಹಿಂಭಾಗ, ಬಂಗಾರಕೊಳ್ಳ, ದೊಡ್ಡ ಬಂಗಾರಕೊಳ್ಳ, ಉಪ್ಪಾರತಟ್ಟು, ನವಣೆ ರಾಶಿ, ಎತ್ತಿನಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

    ಬೆಂಕಿಯ ಕೆನ್ನಾಲಿಗೆಗೆ ಸುಮಾರು ನೂರಾರು ಹೆಕ್ಟೇರ್‌ ಪ್ರದೇಶದ ಅರಣ್ಯ ಸುಟ್ಟು ಕರಕಲಾಗಿದೆ. ಬೆಂಕಿಗೆ ಸಿಲುಕಿ ಸರೀಸೃಪಗಳು, ಔಷಧೀಯ ಸಸ್ಯಗಳು, ಪ್ರಾಣಿ, ಪಕ್ಷಿಗಳು ಬೆಂಕಿಗಾಹುತಿಯಾಗಿವೆ.

    ವಿಷಯ ತಿಳಿದು ಸ್ಥಳಕ್ಕಾಗಮಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಈ ಮೊದಲು ಹಸಿರು ಕಾಶಿಗೆ ಮೊದಲು ಗಣಿ ಹಾಗೂ ಭೂಗಳ್ಳರಿಂದ ಕಪ್ಪತ್ತಗುಡ್ಡಕ್ಕೆ ಆಪತ್ತು ಬಂದಿತ್ತು. ಈಗ ಬೆಂಕಿ ಆಪತ್ತು ಬಂದೊದಗಿದೆ. ಯಾರೋ ಕಿಡಿಗೇಡಿಗಳ ಕೃತ್ಯದಿಂದ ಕಪ್ಪತ್ತಗುಡ್ಡ ಬೆಂಕಿ ಕೆನ್ನಾಲಿಗೆಗೆ ನಲುಗಿದೆ. ಗುಡ್ಡದಲ್ಲಿರುವ ವಿಂಡ್‌ ಫ್ಯಾನ್‌ನಿಂದ ಅವಘಡ ಸಂಭವಿಸಿದೆಯಾ? ಅಥವಾ ಕುರಿಗಾಹಿಗಳ ಕೃತ್ಯನಾ ಎನ್ನುವುದು ತನಿಖೆಯಿಂದ ತಿಳಿದು ಬರಬೇಕಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading