ದುಬೈ: ನಿನ್ನೆ (ಮಾರ್ಚ್ 4) ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳ ಗೆಲುವನ್ನು ದಾಖಲಿಸುವ ಮೂಲಕ ಫೈನಲ್ ಪ್ರವೇಶಿಸಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 49.3 ಓವರ್‌ಗಳಲ್ಲಿ 264 ರನ್ ಕಲೆಹಾಕಿ ಆಲ್‌ಔಟ್ ಆಗಿ ಭಾರತಕ್ಕೆ 265 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಭಾರತ 48.1 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 267 ರನ್ ಕಲೆಹಾಕಿತು.
ಇನ್ನು ಪಂದ್ಯ ಆರಂಭಕ್ಕೂ ಮುನ್ನ ಟೂರ್ನಿಯ ಎರಡು ಸೆಮಿಫೈನಲ್ ಫಲಿತಾಂಶಗಳ ಬಗ್ಗೆ ಮಾತನಾಡಿದ್ದ ಮಿಸ್ಟರ್ 360 ಎಬಿಡಿ ಟೂರ್ನಿಯಲ್ಲಿ ಫೈನಲ್ ತಲುಪಲಿರವ ಎರಡು ತಂಡಗಳು ಯಾವುವೆಂದು ತಿಳಿಸಿದ್ದರು.
ಕಳೆದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಫೈನಲ್‌ನಂತೆ ಈ ಚಾಂಪಿಯನ್ಸ್ ಟ್ರೋಫಿಯಲ್ಲೂ ಸಹ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಫೈನಲ್ ತಲುಪಲಿವೆ ಎಂದಿದ್ದರು. ಅದರಂತೆ ಆಸ್ಟ್ರೇಲಿಯಾ ಮಣಿಸಿದ ಭಾರತ ಫೈನಲ್ ತಲುಪಿದ್ದು, ಇಂದು ನಡೆಯಲಿರುವ ಪಂದ್ಯದಲ್ಲೂ ಸಹ ಎಬಿಡಿ ಹೇಳಿದಂತೆ ದಕ್ಷಿಣ ಆಫ್ರಿಕಾ ಗೆಲ್ಲಲಿದೆಯಾ ನೋಡಬೇಕಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


