ದುಬೈ: ನಿನ್ನೆ (ಮಾರ್ಚ್ 4) ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 4 ವಿಕೆಟ್‌ಗಳ ಗೆಲುವನ್ನು ಸಾಧಿಸುವುದರ ಮೂಲಕ ಫೈನಲ್ ತಲುಪಿದೆ.
ಅತ್ತ ಪಂದ್ಯ ಸೋತ ಆಸ್ಟ್ರೇಲಿಯಾ ಟೂರ್ನಿಯಿಂದ ಹೊರಬಿದ್ದಿದೆ. ಹೀಗೆ ಆಸೀಸ್ ಟೂರ್ನಿಯಿಂದ ಹೊರಬಿದ್ದ ಬೆನ್ನಲ್ಲೇ ತಂಡವನ್ನು ಟೂರ್ನಿಯಲ್ಲಿ ನಾಯಕನಾಗಿ ಮುನ್ನಡೆಸಿದ್ದ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಈ ಮೂಲಕ ಸ್ಮಿತ್ ತಮ್ಮ ಲೆಜೆಂಡರಿ ಏಕದಿನ ಕ್ರಿಕೆಟ್ ಜರ್ನಿಯನ್ನು ಅಂತ್ಯಗೊಳಿಸಿದ್ದಾರೆ. 170 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಸ್ಟೀವ್ ಸ್ಮಿತ್ 154 ಇನ್ನಿಂಗ್ಸ್‌ನಲ್ಲಿ ಬ್ಯಾಟ್ ಬೀಸಿದ್ದು, 5800 ರನ್‌ಗಳನ್ನು ದಾಖಲಿಸಿದ್ದಾರೆ. ಈ ಪೈಕಿ 40 ಇನ್ನಿಂಗ್ಸ್‌ನಲ್ಲಿ ಬೌಲಿಂಗ್ ಮಾಡಿರುವ ಸ್ಟೀವ್ ಸ್ಮಿತ್ 28 ವಿಕೆಟ್ ಪಡೆದಿದ್ದಾರೆ.
ಇನ್ನು ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾವನ್ನು ಪ್ಯಾಟ್ ಕಮಿನ್ಸ್ ಮುನ್ನಡೆಸಬೇಕಿತ್ತು. ಆದರೆ ಗಾಯಕ್ಕೊಳಗಾಗಿರುವ ಕಮಿನ್ಸ್ ಟೂರ್ನಿಗೆ ಅಲಭ್ಯರಾದ ಕಾರಣ ಸ್ಮಿತ್ ನಾಯಕನಾಗಿ ತಂಡವನ್ನು ಮುನ್ನಡೆಸಿ ಯಶಸ್ವಿಯಾಗಿ ಸೆಮಿಫೈನಲ್ ತಲುಪಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


