ದುಬೈ: ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಿನ್ನೆ (ಮಾರ್ಚ್ 4) ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ವಿರಾಟ್ ಕೊಹ್ಲಿ ಜವಾಬ್ದಾರಿಯುತ ಆಟದ ನೆರವಿನಿಂದ 4 ವಿಕೆಟ್ಗಳ ಗೆಲುವನ್ನು ಕಂಡಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 49.3 ಓವರ್ಗಳಲ್ಲಿ 264 ರನ್ ಕಲೆಹಾಕಿ ಆಲ್ಔಟ್ ಆಗಿ ಭಾರತಕ್ಕೆ 265 ರನ್ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಭಾರತ 48.1 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 267 ರನ್ ಕಲೆಹಾಕಿದೆ.
ಈ ಗೆಲುವಿನ ಮೂಲಕ ಭಾರತ ಫೈನಲ್ ಪ್ರವೇಶ ಮಾಡಿದ್ದು, ಸೋತ ಆಸ್ಟ್ರೇಲಿಯಾ ಸೆಮಿಫೈನಲಿಸ್ಟ್ ಆಗಿ ಹೊರಹೊಮ್ಮಿದ್ದಾರೆ. ಇನ್ನು ಈ ಸೋಲಿನ ಮೂಲಕ ಕೇವಲ ಆಸ್ಟ್ರೇಲಿಯಾ ಮಾತ್ರವಲ್ಲದೇ ಪಾಕಿಸ್ತಾನವನ್ನೂ ಸಹ ಭಾರತ ಟೂರ್ನಿಯಿಂದ ಹೊರಹಾಕಿದೆ.
ಹೌದು, ಪಾಕ್ ಮತ್ತೊಮ್ಮೆ ಟೂರ್ನಿಯಿಂದ ಹೊರಬಿದ್ದಿದೆ. ಈ ಹಿಂದೆ ಲೀಗ್ ಹಂತದಿಂದಲೇ ಪಾಕಿಸ್ತಾನ ತಂಡ ಹೊರಬಿದ್ದಿತ್ತು. ಇದೀಗ ಭಾರತ ಫೈನಲ್ಗೇರಿರುವ ಕಾರಣ ಫೈನಲ್ ಪಂದ್ಯ ದುಬೈನಲ್ಲಿ ನಡೆಯಲಿದ್ದು, ಟೂರ್ನಿ ಆಯೋಜಿಸಿದ್ದ ಪಾಕಿಸ್ತಾನದಲ್ಲಿ ಫೈನಲ್ ಪಂದ್ಯ ಕೂಡ ನಡೆಯದೇ ಇರುವುದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಒಳಗಾಗಿದೆ. ಈ ಮೂಲಕ ಮೂರು ದಶಕಗಳ ಬಳಿಕ ಐಸಿಸಿ ಟೂರ್ನಿ ಆಯೋಜಿಸಿರುವ ಪಾಕ್ ತನ್ನ ನೆಲದಲ್ಲಿ ಫೈನಲ್ ಪಂದ್ಯ ಆಯೋಜಿಸುವ ಅವಕಾಶ ಇಲ್ಲದಂತಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


