Tuesday, November 3, 2026
spot_img
More
    spot_img
    HomeChampions Trophy 2025ಕ್ರಿಕೆಟ್ ಇತಿಹಾಸದಲ್ಲೇ ಯಾವ ನಾಯಕನೂ ಮಾಡದ ದಾಖಲೆ ಬರೆದ ರೋಹಿತ್ ಶರ್ಮಾ!

    ಕ್ರಿಕೆಟ್ ಇತಿಹಾಸದಲ್ಲೇ ಯಾವ ನಾಯಕನೂ ಮಾಡದ ದಾಖಲೆ ಬರೆದ ರೋಹಿತ್ ಶರ್ಮಾ!

    ದುಬೈ: ನಿನ್ನೆ ( ಮಾರ್ಚ್ 4 ) ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ 4 ವಿಕೆಟ್‌ಗಳ ಗೆಲುವು ಸಾಧಿಸಿ ಫೈನಲ್ ತಲುಪಿದೆ.

    ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 49.3 ಓವರ್‌ಗಳಲ್ಲಿ 264 ರನ್ ಕಲೆಹಾಕಿ ಆಲ್‌ಔಟ್ ಆಗಿ ಭಾರತಕ್ಕೆ 265 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಭಾರತ 48.1 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 267 ರನ್ ಕಲೆಹಾಕಿತು.

    ಈ ಗೆಲುವಿನ ಮೂಲಕ ರೋಹಿತ್ ಶರ್ಮಾ ಪ್ರಸ್ತುತ ಐಸಿಸಿ ಆಯೋಜಿಸುವ ಎಲ್ಲಾ ಟೂರ್ನಿಗಳಲ್ಲಿಯೂ ತಂಡವನ್ನು ಫೈನಲ್ ಹಂತಕ್ಕೆ ಮುನ್ನಡೆಸಿದ ಪ್ರಥಮ ನಾಯಕ ಎನಿಸಿಕೊಂಡಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಅತಿ ಅಪರೂಪದ ದಾಖಲೆಯೊಂದನ್ನು ಸೃಷ್ಟಿಸಿದ್ದು, ಮುಂದಿನ ದಿನಗಳಲ್ಲಿ ಯಾವ ನಾಯಕ ಈ ದಾಖಲೆ ಮಾಡಲಿದ್ದಾರೆ ನೋಡಬೇಕಿದೆ.

    ರೋಹಿತ್ ಶರ್ಮಾ ನಾಯಕನಾಗಿ ಟೀಮ್ ಇಂಡಿಯಾವನ್ನು ಫೈನಲ್‌ಗೆ ಮುನ್ನಡೆಸಿದ ಐಸಿಸಿ ಟೂರ್ನಿಗಳ ಪಟ್ಟಿ

    2023ರ ವಿಶ್ವ ಚಾಂಪಿಯನ್‌ಶಿಪ್ ಫೈನಲ್ – ರನ್ನರ್ ಅಪ್

    2023ರ ಏಕದಿನ ವಿಶ್ವಕಪ್ ಫೈನಲ್ – ರನ್ನರ್ ಅಪ್

    2024ರ ಟಿ20 ವಿಶ್ವಕಪ್ ಫೈನಲ್ – ವಿನ್ನರ್

    2025ರ ಚಾಂಪಿಯನ್ಸ್ ಟ್ರೋಫಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search