ಬೆಂಗಳೂರು: ಹಿಂದುಳಿದ ವರ್ಗಗಳ ಹಾಸ್ಟೆಲ್‍ಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಲಾಗುತ್ತದೆ. ಒಂದು ವೇಳೆ ಸೌಲಭ್ಯ ಸಿಗದೇ ಇದ್ದರೆ ವಿದ್ಯಾಸಿರಿ ಯೋಜನೆಯ ಮೂಲಕ ಶಿಕ್ಷಣಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ ಭರವಸೆ ನೀಡಿದರು.
ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಕುಂದಾಪುರ ಕ್ಷೇತ್ರದ ಶಾಸಕ ಕಿರಣ್‍ಕುಮಾರ್ ಕೊಡಗಿ, ತಮ್ಮ ಕ್ಷೇತ್ರಕ್ಕೆ ಮೆಟ್ರಿಕ್ ನಂತರದ ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕುಂದಾಪುರದಲ್ಲಿ 15 ಹಾಸ್ಟೆಲ್‍ಗಳಿವೆ. 370 ಅರ್ಜಿಗಳು ಬಂದಿದ್ದವು. ಎಲ್ಲರಿಗೂ ಹಾಸ್ಟೆಲ್ ಸೌಲಭ್ಯ ಒದಗಿಸಲಾಗಿದೆ. ಮೆಟ್ರಿಕ್ ನಂತರದ ಹಾಸ್ಟಲ್‍ಗಳ ಸಮಸ್ಯೆ ಹೆಚ್ಚಾಗಿದೆ. ಕಳೆದ ವರ್ಷ ಬಾಲಕ ಹಾಗೂ ಬಾಲಕಿಯರಿಗೆ ತಲಾ 75 ರಂತೆ 150 ಹಾಸ್ಟೆಲ್‍ಗಳನ್ನು ಜಿಲ್ಲಾಕೇಂದ್ರಗಳಿಗೆ ಮಂಜೂರು ಮಾಡಲಾಗಿತ್ತು. ತಾಲ್ಲೂಕು ಕೇಂದ್ರಗಳಿಗೂ ಹಾಸ್ಟೆಲ್ ಸೌಲಭ್ಯ ಒದಗಿಸಲು ಹಂತಹಂತವಾಗಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


