Thursday, November 5, 2026
spot_img
More
    spot_img
    HomeTop Storyಗ್ರಾಹಕರೇ ಎಚ್ಚರ: ಟೊಮ್ಯಾಟೊ ಸಾಸ್‌ನಲ್ಲೂ ಅಪಾಯಕಾರಿ ರಾಸಾಯನಿಕ ಬಳಕೆ!

    ಗ್ರಾಹಕರೇ ಎಚ್ಚರ: ಟೊಮ್ಯಾಟೊ ಸಾಸ್‌ನಲ್ಲೂ ಅಪಾಯಕಾರಿ ರಾಸಾಯನಿಕ ಬಳಕೆ!

    ಬೆಂಗಳೂರು: ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌, ಕಲ್ಲಂಗಡಿ, ಬಟಾಣಿಗೆ ಬಳಸುವ ಕೃತಕ ಬಣ್ಣದಲ್ಲೂ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಅಂಶಗಳು ಪತ್ತೆಯಾಗಿರುವುದು ಕಂಡು ಬಂದಿದೆ. ಈ ಬೆನ್ನಲ್ಲೇ ಟೊಮ್ಯಾಟೊ ಸಾಸ್‌ನಲ್ಲೂ ಅಪಾಯಕಾರಿ ರಾಸಾಯನಿಕ ಬಳಕೆ ಮಾಡುತ್ತಿರುವ ಬಗ್ಗೆ ವರದಿ ಬಹಿರಂಗಪಡಿಸಿದೆ.

    ಆಹಾರ ಪ್ರಿಯರು ಬಾಯಿ ಚಪ್ಪರಿಸಿಕೊಂಡು ತಿನ್ನುವ ಟೊಮ್ಯಾಟೊ ಸಾಸ್‌ನಲ್ಲೂ ರಾಸಾಯನಿಕ ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ಇದು ಆರೋಗ್ಯಕ್ಕೆ ಭಾರೀ ಹಾನಿಯನ್ನುಂಟು ಮಾಡುತ್ತದೆ ಎಂದು ವರದಿ ಬಹಿರಂಗಪಡಿಸಿದ್ದು, ಜನತೆಯಲ್ಲಿ ಆತಂಕ ಮನೆಮಾಡಿದೆ.

    ಕಳೆದ ಫೆಬ್ರವರಿಯಲ್ಲಿ ಟೊಮ್ಯಾಟೊ ಸಾಸ್‌ ಮಾದರಿಯನ್ನು ಪಡೆದು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ವರದಿಯು ಅಧಿಕಾರಿಗಳ ಕೈ ಸೇರಿದ್ದು, ವರದಿಯಲ್ಲಿ ಅನ್‌ಸೇಫ್‌ ಎಂದು ಬಂದಿರುವುದಾಗಿ ಮಾಹಿತಿ ಲಭ್ಯವಾಗಿದೆ.

    ಮೂಲಗಳ ಪ್ರಕಾರ ಸಾಸ್‌ನಲ್ಲಿ ರಾಸಾಯನಿಕ ಬಳಕೆಯಿಂದ ಉಪ್ಪಿನ ಪ್ರಮಾಣ ಅಧಿಕವಾಗಿರುತ್ತದೆ. ಈ ಸಾಸ್‌ ತಿನ್ನುವುದರಿಂದ ರಕ್ತದೊತ್ತಡ ಅಧಿಕವಾಗುತ್ತದೆ. ನಿಶಕ್ತಿಗೆ ಕಾರಣವಾಗುತ್ತದೆ. ಇದನ್ನು ತಿನ್ನುವುದರಿಂದ ತಾಳ್ಮೆ ಮತ್ತು ಶಾಂತ ಮನಸ್ಥಿತಿ ಕಡಿಮೆಯಾಗುತ್ತದೆ. ನಿಯಂತ್ರಣ ಕಳೆದುಕೊಳ್ಳುವ ಸಾಧ್ಯತೆಯೂ ಇರುತ್ತದೆ ಎಂದು ಹೇಳಲಾಗಿದೆ.

    ಮತ್ತಷ್ಟು ಆತಂಕಕ್ಕಾರಿ ಮಾಹಿತಿಯೆಂದರೆ ಬೆಲ್ಲ, ಚಿಪ್ಸ್‌, ಪ್ರೈ ಬಟಾಣಿ ಪದಾರ್ಥಗಳಿಗೂ ಕೂಡ ರಾಸಾಯನಿಕ ಮಾಡುತ್ತಿರುವುದು ಬಯಲಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search