ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಮುಖ ನಟ ಮತ್ತು ನಿರ್ದೇಶಕ ಉಪೇಂದ್ರ ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಡಿದ ಊಹಾಪೋಹಗಳಿಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ.
“ಎಲ್ಲರಿಗೂ ನಮಸ್ಕಾರ.. ನಾನು ಆರೋಗ್ಯವಾಗಿದ್ದೇನೆ.. ರೆಗ್ಯುಲರ್ ಚೆಕ್ ಅಪ್‌ಗಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದೆ ಅಷ್ಟೇ.. ಯಾವುದೇ ಊಹಾ ಪೋಹಗಳಿಗೆ ಕಿವಿಕೊಟ್ಟು ಗೊಂದಲಕ್ಕಿಡಾಗಬೇಡಿ.. ನಿಮ್ಮ ಪ್ರೀತಿ ಕಾಳಜಿಗೆ ಅನಂತ ಧನ್ಯವಾದಗಳು,” ಎಂದು ಉಪೇಂದ್ರ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಇಂದು ಸಾಮಾಜಿಕ ಜಾಲತಾಣದಲ್ಲಿ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ ಎಂಬ ಸುದ್ದಿ ಹರಿದಾಡಿತ್ತು. ಆದರೆ, ಇದು ಕೇವಲ ದೈನಂದಿನ ಆರೋಗ್ಯ ತಪಾಸಣೆ ಮಾತ್ರ ಎಂದು ಉಪೇಂದ್ರ ಸ್ಪಷ್ಟಪಡಿಸಿದ್ದಾರೆ.
ಇನ್ನು ಕಳೆದ ವರ್ಷ ತಮ್ಮದೇ ನಿರ್ದೇಶನದ ಯುಐ ಚಿತ್ರದ ಮೂಲಕ ನಿರೀಕ್ಷೆಯನ್ನು ಸಂಪೂರ್ಣವಾಗಿ ತಲುಪದಿದ್ದರೂ ಸದ್ದು ಮಾಡಿದ್ದ ಉಪೇಂದ್ರ ಸದ್ಯ ಅರ್ಜುನ್ ಜನ್ಯಾ ನಿರ್ದೇಶನದ 45 ಚಿತ್ರದಲ್ಲಿ ಶಿವರಾಜ್‌ಕುಮಾರ್ ಜತೆ ನಟಿಸಿದ್ದಾರೆ. ಅಲ್ಲದೇ ಲೋಕೇಶ್ ಕನಕರಾಜ್ ನಿರ್ದೇಶನದ ಕೂಲಿ ಚಿತ್ರದಲ್ಲೂ ಸಹ ನಟಿಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


