ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ರಾಜ್ಯಕ್ಕೆ ಭೇಟಿ ನೀಡಿದಾಗಲೆಲ್ಲಾ ಏನಾದರೊಂದು ಮಾತನಾಡಿ ಸುದ್ದಿಯಲ್ಲಿರಬೇಕು ಎಂಬುದನ್ನು ಬಿಟ್ಟು ರಾಜ್ಯಕ್ಕೆ ದೊಡ್ಡ ಕೊಡುಗೆ ನೀಡುವಂತಹ ಕಾರ್ಯ ಮಾಡಲಿ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯಕ್ಕೆ ಬೃಹತ್ ಕೈಗಾರಿಕೆ ತರಲಿ, ಮಂಡ್ಯ ಮೈ ಶುಗರ್ ಕಾರ್ಖಾನೆ ಪುನಶ್ಚೇತನಕ್ಕೆ 500 ಕೋಟಿ ರೂ. ಕೇಂದ್ರದಿಂದ ಅನುದಾನ ನೀಡಲಿ ಎಂದು ಒತ್ತಾಯಿಸಿದರು.
ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ತರಲಿ. ಸಿಎಸ್‍ಆರ್ ನಿಧಿಯನ್ನು ಹೆಚ್ಚು ತರಲಿ. ಸಂಸದರ ನಿಧಿ ಹೆಚ್ಚಿಸಲಿ. ರಾಜ್ಯಕ್ಕೆ ಹೆಚ್ಚುವರಿಯಾಗಿ 10 ಸಾವರಿ ಕೋಟಿ ರೂ. ಕೇಂದ್ರದಿಂದ ಅನುದಾನ ತರಲಿ ಎಂದು ಅವರು ಸಲಹೆ ಮಾಡಿದರು.
ದಿಶಾ ಸಭೆಗೆ ಹೋಗಬಾರದೆಂದೇನೂ ಇಲ್ಲ. ಪೂರ್ವನಿಗಧಿತ ಕಾರ್ಯಕ್ರಮಗಳಿಂದಾಗಿ ನಿನ್ನೆ ಮಂಡ್ಯದಲ್ಲಿ ನಡೆದ ದಿಶಾ ಸಭೆಗೆ ಹೋಗಲಾಗಲಿಲ್ಲ. ಅದೇ ರೀತಿ ನಾವು ಏರ್ಪಡಿಸುವಂತಹ ಕಾರ್ಯಕ್ರಮಗಳಿಗೆ ಕೇಂದ್ರ ಸಚಿವರು ಬರಲಿ. ನಾವೂ ಅವರು ಸೇರಿ ಮಂಡ್ಯ ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸೋಣ ಎಂದರು.
ಇನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಬಗ್ಗೆ ವಿಧಾನಪರಿಷತ್ ಸದಸ್ಯ ರವಿಕುಮಾರ್ ನೀಡಿರುವ ಹೇಳಿಕೆ ಸರಿಯಲ್ಲ. ಅವರ ನಡವಳಿಕೆ ತಿದ್ದುಕೊಳ್ಳಬೇಕು. ಅದನ್ನು ಬಿಟ್ಟು ಸಮರ್ಥನೆ ಮಾಡಿಕೊಳ್ಳುವುದು ಸರಿಯಲ್ಲ. ಮುಖ್ಯ ಕಾರ್ಯದರ್ಶಿಯವರ ಬಗ್ಗೆ ಬಳಸಿರುವ ಪದಗಳು ಬಿಜೆಪಿಯವರ ಮನಸ್ಥಿತಿಯನ್ನು ತೋರುತ್ತವೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಪಡೆದ ಮೊಹಮ್ಮದ್ ಸಿರಾಜ್; 7 ವಿಕೆಟ್ ಪಡೆದಿರುವುದು ಈತ ಒಬ್ಬನೇ!
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


