ಬೆಂಗಳೂರು: ಕುಣಿಗಲ್ ತಾಲ್ಲೂಕಿಗೊಂದೇ ಅಲ್ಲ, ಇಡೀ ತುಮಕೂರು ಜಿಲ್ಲೆಗೆ ನೀರು ಕಲ್ಪಿಸುವ ಯೋಜನೆ ರೂಪಿಸಲಾಗುತ್ತಿದೆ ಎಂದು ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ತುಮಕೂರು ಜಿಲ್ಲೆಯ ಶಾಸಕರು ಹಾಗೂ ಜನಪ್ರತಿನಿಧಿಗಳೊಂದಿಗೆ ಲಿಂಕ್ ಕೆನಾಲ್ ಯೋಜನೆಯ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಮೊದಲು ಶಾಸಕರು, ತಜ್ಞರ ಸಮಿತಿ ರಚನೆ ಮಾಡಿ ಎಂದು ಹೇಳಿದ್ದರು. ಅದರಂತೆ ಸಮಿತಿ ರಚಿಸಿ ವರದಿ ಪಡೆದು ಕೆಲಸ ಆರಂಭಿಸಿದ್ದೇವೆ. ಈಗ ಮತ್ತೊಂದು ರೀತಿಯ ಆರೋಪಗಳು ಕೇಳಿಬರುತ್ತಿವೆ.
ನಿನ್ನೆ ನಡೆದ ಸಭೆಯಲ್ಲಿ ಕೇಂದ್ರ ಸಚಿವ ಸೋಮಣ್ಣ ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರಿಂದ ವರದಿ ಪಡೆಯುವಂತೆ ಸಲಹೆ ನೀಡಿದ್ದಾರೆ. ಆ ರೀತಿಯ ವರದಿಯನ್ನು ತೆಗೆದುಕೊಳ್ಳುತ್ತೇವೆ ಎಂದರು.
ಶಾಸಕರ ವಿಚಾರದಲ್ಲಿ ಬಹಳ ಗೌರವಪೂರ್ವಕವಾಗಿ ಅವರು ಹೇಳಿದ್ದನ್ನು ಕೇಳಿದ್ದೇವೆ. ತಜ್ಞರ ಸಮಿತಿ ವರದಿ ಬಳಿಕ ಮತ್ತೆ ಪ್ರತಿಭಟನೆ ಮಾಡುವುದು ಸರಿಯಲ್ಲ. ಈಗ ಪೈಪ್‍ಲೈನ್ ಬದಲಾಗಿ ತೆರೆದ ಕಾಲುವೆಗಳ ಮೂಲಕ ಕುಣಿಗಲ್‍ಗೆ ನೀರು ತೆಗೆದುಕೊಂಡು ಹೋಗುವಂತೆ ಕೇಳುತ್ತಿದ್ದಾರೆ. ಈ ವಿಚಾರದಲ್ಲಿ ಸರ್ಕಾರ ನಿರ್ಧಾರ ತೆಗೆದುಕೊಂಡಿದ್ದಾಗಿದೆ. ಅದಕ್ಕೆ ಬದ್ಧರಾಗಿರುತ್ತೇವೆ ಎಂದು ಹೇಳಿದರು.
ಆಯಾ ಸರ್ಕಾರ ಬೇರೆ ಬೇರೆ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತವೆ. ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಆರಂಭಿಸಿದ್ದು ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ. 600 ಕೋಟಿ ರೂ ನಷ್ಟಿದ್ದ ಯೋಜನಾ ವೆಚ್ಚ ಈಗ 900 ಕೋಟಿ ರೂ.ಗಳಾಗಿವೆ. ಅದಕ್ಕೆ ಯಾರು ಹೊಣೆ?, ತುಮಕೂರು ಗ್ರಾಮಾಂತರ ಶಾಸಕ ಸುರೇಶ್‍ಗೌಡ, ತುರುವೇಕೆರೆಯ ಕೃಷ್ಣಪ್ಪ ಅವರನ್ನು ಕೇಳಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದರು.
ತಮ ಕ್ಷೇತ್ರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ಬಿಜೆಪಿ ಸರ್ಕಾರ ಸ್ಥಳಾಂತರ ಮಾಡಿತ್ತು. ಆಗಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಭರವಸೆ ಕೊಟ್ಟು ಬಜೆಟ್‍ನಲ್ಲಿ ಪ್ರಕಟಿಸಿದ ಹೊರತಾಗಿಯೂ ಕನಕಪುರದ ಬದಲಾಗಿ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಸ್ಥಳಾಂತರಗೊಂಡಿತ್ತು. ಆಯಾ ಸರ್ಕಾರದ ನಿಲುವುಗಳು ಬೇರೆ ಬೇರೆಯಾಗಿರುತ್ತವೆ ಎಂದು ಹೇಳಿದರು.
ಕೊಡವರಲ್ಲಿ ಮೊದಲು ನಟಿಯಾದವಳು ನಾನೇ ಎಂದು ಮಹಾ ಯಡವಟ್ಟು ಮಾಡಿಕೊಂಡ ರಶ್ಮಿಕಾ!
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


