Monday, September 21, 2026
spot_img
More
    spot_img
    HomeSportsCricketಮೊದಲ ಇನ್ನಿಂಗ್ಸ್‌ನಲ್ಲಿ 269 ಎರಡನೇ ಇನ್ನಿಂಗ್ಸ್‌ನಲ್ಲೂ ಶತಕ ಬಾರಿಸಿದ ಗಿಲ್;‌ ಬೃಹತ್‌ ಮೊತ್ತದತ್ತ ಭಾರತ

    ಮೊದಲ ಇನ್ನಿಂಗ್ಸ್‌ನಲ್ಲಿ 269 ಎರಡನೇ ಇನ್ನಿಂಗ್ಸ್‌ನಲ್ಲೂ ಶತಕ ಬಾರಿಸಿದ ಗಿಲ್;‌ ಬೃಹತ್‌ ಮೊತ್ತದತ್ತ ಭಾರತ

    ಬರ್ಮಿಂಗ್‌ಹ್ಯಾಮ್:‌ ಎಡ್ಜ್‌ಬಾಸ್ಟನ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್‌ ತಂಡಗಳ ನಡುವಿನ ಎರಡನೇ ಟೆಸ್ಟ್‌ ಪಂದ್ಯದ ನಾಲ್ಕನೇ ದಿನದಾಟದಂದು ಶುಬ್‌ಮನ್‌ ಗಿಲ್‌ ಶತಕ ಬಾರಿಸಿದ್ದು ತಮ್ಮ ಅಬ್ಬರದ ಆಟವನ್ನು ಈ ಇನ್ನಿಂಗ್ಸ್‌ನಲ್ಲೂ ಮುಂದುವರಿಸಿದ್ದಾರೆ.

    Advertisement

    ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲೇ ದ್ವಿಶತಕ ಬಾರಿಸಿ ತಂಡಕ್ಕೆ ಬೃಹತ್‌ ಕೊಡುಗೆ ನೀಡಿದ್ದ ಗಿಲ್‌ ಇದೀಗ ಶತಕ ಬಾರಿಸಿದ್ದು, ತಂಡದ ರನ್‌ ಮೊತ್ತದಲ್ಲಿ ಸಿಂಹಪಾಲನ್ನು ಹೊಂದಿದ್ದಾರೆ. 130 ಎಸೆತಗಳಲ್ಲಿ ಶತಕ ಪೂರೈಸಿರುವ ಗಿಲ್‌ ಈ ಇನ್ನಿಂಗ್ಸ್‌ನಲ್ಲಿ ಎಷ್ಟು ರನ್‌ ಬಾರಿಸಲಿದ್ದಾರೆ ನೋಡಬೇಕಿದೆ.

    ಇನ್ನು ಟೀ ಬ್ರೇಕ್‌ ಸಮಯಕ್ಕೆ ಭಾರತ 4 ವಿಕೆಟ್‌ ನಷ್ಟಕ್ಕೆ 304 ರನ್‌ ಕಲೆಹಾಕಿದ್ದು ಮೊದಲ ಇನ್ನಿಂಗ್ಸ್‌ನ 180 ರನ್‌ಗಳ ಮುನ್ನಡೆ ಸೇರಿದಂತೆ ಸದ್ಯ 484 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ.

    ಎರಡನೇ ಇನ್ನಿಂಗ್ಸ್‌ನಲ್ಲಿ ತಂಡದ ಪರ ಯಶಸ್ವಿ ಜೈಸ್ವಾಲ್‌ 28, ಕೆಎಲ್‌ ರಾಹುಲ್‌ 55, ಕರುಣ್‌ ನಾಯರ್‌ 2, ರಿಷಭ್‌ ಪಂತ್‌ 65, ಹಾಗೂ ಜಡೇಜಾ ಅಜೇಯ 25 ರನ್‌ ಬಾರಿಸಿದ್ದಾರೆ.

    ಬಹುಭಾಷಾ ನಟ ಪ್ರಕಾಶ್‌ ರಾಜ್‌ ಗುಜರಾತ್‌ನಲ್ಲೂ ಹೋರಾಟ ಮಾಡಲಿ; ಎಂಬಿ ಪಾಟೀಲ್‌ ಟಾಂಗ್‌ಎಐ

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading