Saturday, September 19, 2026
spot_img
More
    spot_img
    HomeCrimeಚಾಮರಾಜನಗರ: ಪತ್ನಿ ಗರ್ಭಿಣಿಯಾಗಿದ್ದಕ್ಕೆ ಬರ್ಬರವಾಗಿ ಕೊಲೆಗೈದ ಪತಿರಾಯ!

    ಚಾಮರಾಜನಗರ: ಪತ್ನಿ ಗರ್ಭಿಣಿಯಾಗಿದ್ದಕ್ಕೆ ಬರ್ಬರವಾಗಿ ಕೊಲೆಗೈದ ಪತಿರಾಯ!

    ಚಾಮರಾಜನಗರ: ಪತ್ನಿ ಗರ್ಭಿಣಿಯಾದಳು ಎಂಬ ಕಾರಣಕ್ಕೆ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ದೊಳ್ಳಿಪುರ ಗ್ರಾಮದಲ್ಲಿ ನಡೆದಿದೆ.

    Advertisement

    ಶುಭಾ ಎಂಬುವವರೇ ಪತಿಯಿಂದಲೇ ಕೊಲೆಯಾದ ದುರ್ದೈವಿಯಾಗಿದ್ದಾರೆ. ಮಹೇಶ್‌ ಎಂಬಾತನೇ ಪತ್ನಿಯನ್ನು ಕೊಲೆ ಮಾಡಿದ ಆರೋಪಿ.

    ಜೂನ್.‌30ರಂದು ಪತ್ನಿಯನ್ನು ಎಚ್.ಡಿ.ಫಾರೆಸ್ಟ್‌ನ ಡೊಳ್ಳಿಪುರದಲ್ಲಿ ಹತ್ಯೆ ಮಾಡಿದ್ದ ಹಂತಕ ಮಹೇಶ್‌, ಪೊಲೀಸರಿಗೆ ಖುದ್ದು ಕರೆ ಮಾಡಿ ಯಾರೋ ಪತ್ನಿಯನ್ನು ಕೊಲೆ ಮಾಡಿದ್ದಾರೆ ಎಂದು ಹೇಳಿದ್ದನು.

    ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮಹೇಶ್‌ನನ್ನು ವಿಚಾರಣೆ ನಡೆಸುತ್ತಾರೆ. ಈ ವೇಳೆ ಮಹೇಶ್‌ ಮನಬಂದಂತೆ ಮಾತನಾಡುತ್ತಿದ್ದ. ಅಲ್ಲದೇ ಆತನ ಶರ್ಟ್‌ ಮೇಲೆ ರಕ್ತದ ಕಲೆ ಇರುವುದು ಕಂಡು ಬಂದಿತ್ತು. ಈ ವೇಳೆ ಅನುಮಾನಗೊಂಡ ಪೊಲೀಸರು ಮಹೇಶ್‌ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ತಾನೇ ಪತ್ನಿಯನ್ನು ಕೊಂದಿದ್ದಾಗಿ ಬಾಯ್ಬಿಟ್ಟಿದ್ದಾನೆ.

    ಪತ್ನಿ ಗರ್ಭಿಣಿಯಾಗಿದ್ದಳು. ನನಗೆ ಮಕ್ಕಳಾಗುವುದು ಇಷ್ಟವಿರಲಿಲ್ಲ. ಆದರೆ ಕೆಲ ದಿನಗಳ ಹಿಂದೆ ತಾನು ಗರ್ಭಿಣಿ ಎಂಬ ವಿಚಾರವನ್ನು ಹೇಳಿದ್ದಳು. ಅಲ್ಲದೇ ಮಗುವನ್ನು ಉಳಿಸಿಕೊಳ್ಳಲು ಆಕೆ ಸಾಕಷ್ಟು ಯತ್ನಿಸಿದ್ದಳು. ಇದೇ ಕಾರಣಕ್ಕೆ ಕೋಪಗೊಂಡಿದ್ದ ಮಹೇಶ ವ್ಯವಸ್ಥಿತವಾಗಿ ಸಂಚುರೂಪಿಸಿ ತೋಟದ ಮನೆಗೆ ಕರೆದೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

    ಬಳಿಕ ಇದರ ಬಗ್ಗೆ ತನಗೇನೂ ಗೊತ್ತಿಲ್ಲ ಎಂದು ಕಥೆ ಕಟ್ಟಿ, ಆರ್ಥಿಕ ಸಮಸ್ಯೆ ಕಾರಣಕ್ಕೆ ಮಕ್ಕಳಾಗುವುದು ಇಷ್ಟವಿಲ್ಲವೆಂದು ಪತ್ನಿಯನ್ನು ಕೊಂದಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

    ಕೊಡವರಲ್ಲಿ ಮೊದಲು ನಟಿಯಾದವಳು ನಾನೇ ಎಂದು ಮಹಾ ಯಡವಟ್ಟು ಮಾಡಿಕೊಂಡ ರಶ್ಮಿಕಾ!

    ಎಐ ಕೃಷಿ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading