ಶಿವಮೊಗ್ಗ: ಜುಲೈ.14ರಂದು ದೇಶದ 2ನೇ ಅತಿ ಉದ್ದದ ಸಿಗಂದೂರು ಕೇಬಲ್ ಸೇತುವೆ ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಂಸದ ಬಿ.ವೈ.ರಾಘವೇಂದ್ರ ಅವರು, ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿರುವ ಯಾತ್ರಾಸ್ಥಳ ಸಿಗಂದೂರು ಸೇತುವೆಗೆ ಜುಲೈ.14ರಂದು ಚಾಲನೆ ಸಿಗಲಿದೆ.
ಲೋಕಾರ್ಪಣೆ ಸಂದರ್ಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ, ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಭಾಗಿಯಾಗಲಿದ್ದಾರೆ. ಈ ಸೇತುವೆಗೆ ಸಿಗಂಧೂರು ಚೌಡೇಶ್ವರಿ ದೇವಿ ಹೆಸರು ಇಡಲು ರಾಜ್ಯ ಸರ್ಕಾರ ಶಿಫಾರಸು ಮಾಡಲಿ ಎಂದು ಸಂಸದ ಬಿ.ವೈ.ರಾಘವೇಂದ್ರ ಆಗ್ರಹಿಸಿದರು.
470 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ದೇಶದ 2ನೇ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆ ಇದಾಗಿದ್ದು, ಈ ಸೇತುವೆಯ ಕಾಮಗಾರಿ 2020ರ ಡಿಸೆಂಬರ್‌ನಲ್ಲಿ ಆರಂಭವಾಗಿತ್ತು.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಇರುವ ಪ್ರಸಿದ್ಧ ಕ್ಷೇತ್ರ ಸಿಗಂದೂರಿನಲ್ಲಿ ಚೌಡೇಶ್ವರಿ ಅಮ್ಮನವರು ನೆಲೆನಿಂತಿದ್ದಾರೆ. ತಾಯಿಯನ್ನು ಸಿಗಂದೂರೇಶ್ವರಿ ಎಂದು ಸಹ ಕರೆಯುತ್ತಾರೆ.
ಸಿಗಂದೂರಿಗೆ ಬರುವ ಪ್ರವಾಸಿಗರ ಪ್ರಮುಖ ಆಕರ್ಷಣೆ ಇಲ್ಲಿನ ಲಾಂಚ್, ಸದ್ಯ ಸಿಗಂದೂರು ಸೇಯುವೆ ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದ್ದು, ಸದ್ಯದಲ್ಲೇ ಪ್ರವಾಸಿಗರಿಗೆ ಈ ಸೇತುವೆ ಮುಕ್ತವಾಗಲಿದೆ. ಸೇತುವೆಯ ಲೋಡ್ ಟೆಸ್ಟಿಂಗ್ ದೃಶ್ಯ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದು, ಎಲ್ಲರ ಗಮನ ಸೆಳೆದಿದೆ.
ಕೊಡವರಲ್ಲಿ ಮೊದಲು ನಟಿಯಾದವಳು ನಾನೇ ಎಂದು ಮಹಾ ಯಡವಟ್ಟು ಮಾಡಿಕೊಂಡ ರಶ್ಮಿಕಾ!
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


