Sunday, August 30, 2026
spot_img
More
    spot_img
    HomeBreaking Newsಸಾರಿಗೆ ಮುಷ್ಕರ ಆರಂಭ! ಆರಂಭವಾಗಿದೆಯೇ ಬಸ್ ಗಳ ಓಡಾಟ?

    ಸಾರಿಗೆ ಮುಷ್ಕರ ಆರಂಭ! ಆರಂಭವಾಗಿದೆಯೇ ಬಸ್ ಗಳ ಓಡಾಟ?

    ವೇತನ ಹೆಚ್ಚಳ, ವೇತನ ಹೆಚ್ಚಳದ ಹಿಂಬಾಕಿ ಪಾವತಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಎಸ್‌ಆರ್ಟಿಸಿ, ಬಿಎಂಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳ ನೌಕರರು ಇಂದಿನಿಂದ ಮುಷ್ಕರ ಕೈಗೊಂಡಿದ್ದಾರೆ.ಪರಿಣಾಮ ರಾಜ್ಯದ್ಯಂತ ಬಸ್ ಸಂಚಾರದಲ್ಲಿ ಸಮಸ್ಯೆ ಉಂಟಾಗಿದೆ.

    Advertisement

    ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಇದರಿಂದಗಿ ಸಾರ್ವಜನಿಕರಿಗೆ ಆತಂಕ ಶುರುವಾಗಿದೆ. ಬೆಂಗಳೂರಿನಲ್ಲಿ ಸಾರಿಗೆ ನೌಕರರ ಮುಷ್ಕರದ ಬಿಸಿ ಭಾಗಶಃ ತಟ್ಟಿದೆ. ಹಲವೆಡೆ ಬಸ್​​ಗಳು ಸಂಚರಿಸುತ್ತಿವೆ. ಏರ್​​ಪೋರ್ಟ್ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗಿಲ್ಲ. ಆದರೆ, ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಯಶವಂತಪುರ ಬಸ್​ ನಿಲ್ದಾಣಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರ ಆರಂಭವಾಗಿಲ್ಲ.

    ಹೀಗಿದ್ದರೂ, ಯಾವುದೇ ಚಿಂತೆ ಬೇಡ ಎಂದು ಸಾರ್ವಜನಿಕರಿಗೆ ರಾಜ್ಯ ಸರ್ಕಾರ ಅಭಯ ನೀಡಿದೆ. ಯಾಕೆಂದರೆ, ಸಾರಿಗೆ ನಿಗಮಗಳು ತಮ್ಮದೇ ಆದ ವ್ಯವಸ್ಥೆಗಳನ್ನು ಮಾಡಿಕೊಂಡಿವೆ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ ಶುರುವಾಗಿದೆ. ರಾಜ್ಯದ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

    ನೌಕರರ ಮುಷ್ಕರವನ್ನು 1 ದಿನ ತಡೆ ಹಿಡಿಯುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಅದರ ಹೊರತಾಗಿಯೂ ಪಟ್ಟು ಬಿಡದ ಸಾರಿಗೆ ನೌಕರರು ಇಂದು ಬೆಳಗ್ಗೆಯಿಂದಲೇ ಮುಷ್ಕರವನ್ನು ಆರಂಭಿಸಿದೆ. ರಾಜ್ಯ ಸರ್ಕಾರದ ಈ ಸೂಚನೆ ಬೆನ್ನಲ್ಲೇ ಹಲವು ಜಿಲ್ಲೆಗಳಲ್ಲಿ ಪರ್ಯಾಯ ವ್ಯವಸ್ಥೆಯನ್ನು ಸಾರಿಗೆ ನಿಗಮಗಳು ಮಾಡಿಕೊಂಡಿವೆ.

    ಮುಷ್ಕರ ಹಿನ್ನೆಲೆಯಲ್ಲಿ ಬಸ್ ನಿಲ್ದಾಣಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಚ್ಚೆಚ್ಚರಿಕೆ ವಹಿಸಲಾಗಿದೆ. ನಾಲ್ಕೂ ನಿಗಮಗಳಲ್ಲಿ ಸುಮಾರು 1,700 ಎಲೆಕ್ನಿಕ್ ಬಸ್‌ಗಳು ಸೇವೆ ನೀಡುತ್ತಿವೆ. ಅದರಲ್ಲಿ ಬಿಎಂಟಿಸಿ ಒಂದರಲ್ಲೇ 1,500 ಎಲೆಕ್ನಿಕ್ ಬಸ್‌ಗಳು ಸಂಚರಿಸುತ್ತಿವೆ. ಆ ಬಸ್ ಗಳಲ್ಲಿ ಖಾಸಗಿ ಚಾಲಕರನ್ನು ನಿಯೋಜಿಸಲಾಗಿದೆ. ಆ ಚಾಲಕರು ಸಾರಿಗೆ ನೌಕರರ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿಲ್ಲ. ಆದ್ದರಿಂದ ಎಲೆಕ್ಟಿಕ್ ಬಸ್‌ಗಳು ಮುಷ್ಕರದ ಸಂದರ್ಭದಲ್ಲಿ ಸೇವೆ ನೀಡಲಿವೆ.

    ,ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಶಾಕ್:‌ ರಜೆ ಹಾಗೂ ವಾರದ ರಜೆ ರದ್ದು


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading