ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ನಡೆಸಿದ ಸಭೆಯ ವಿವರ ಇಲ್ಲಿದೆ.
ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೆಎಸ್‌ಆರ್ಟಿಸಿ ಅಧ್ಯಕ್ಷ ಎಸ್.ಆರ್ ಶ್ರೀನಿವಾಸ್, ಎನ್ಡಬ್ಲುಕೆಎಸ್‌ಆರ್ಟಿಸಿ ಅಧ್ಯಕ್ಷ ರಾಜುಕಾಗೆ, ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.
ಸಾರಿಗೆ ನೌಕರರ ಸಂಘದ ಚುನಾವಣೆ ನಡೆಸುವ ಕುರಿತು ಪರಿಶೀಲನೆ ನಡೆಸಿ ಎಲ್ಲಾ ಬೇಡಿಕೆಗಳನ್ನು ಮಾತುಕತೆ ಮೂಲಕ ಬಗೆಹರಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದ್ದಾರೆ.
ವೇತನ ಪರಿಷ್ಕರಣೆ ಕುರಿತಾಗಿ ಶ್ರೀನಿವಾಸ ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿ ದಿನಾಂಕ 01-1-22 ರಿಂದ 28-2-23ರವರೆಗೆ ಬಾಕಿ ವೇತನ ಕೊಡಬಹುದು ಎಂದು ಶಿಫಾರಸು ಮಾಡಿತ್ತು. ಆದರೆ ಸಿಎಂ ನಾವು ಅಧಿಕಾರಕ್ಕೆ ಬಂದಾಗ ಎಲ್ಲಾ ನಿಗಮಗಳಿಗೆ ಒಟ್ಟಾರೆ 4ಸಾವಿರ ಕೋಟಿ ಸಾಲ ಇತ್ತು. 2018ರಲ್ಲಿ ಕೇವಲ ರೂ. 14 ಕೋಟಿ ಮಾತ್ರ ಬಾಕಿಯಿತ್ತು. ಪ್ರಸ್ತುತ ಯಾವ ಸಾರಿಗೆ ನಿಗಮ ಸಹ ಲಾಭದಲ್ಲಿಲ್ಲ. ಸರ್ಕಾರ ಯಾರಿಗೂ ಅನ್ಯಾಯ ಮಾಡುವುದಿಲ್ಲ. ಎಲ್ಲಾ ನಿಗಮದವರು ಸಹಕರಿಸಬೇಕು ಎಂದಿದ್ದಾರೆ.
ಸಮಿತಿಯ ಶಿಫಾರಸು ಆಧಾರದಲ್ಲಿ ಈ ಕುರಿತು ದಿನಾಂಕ 01-03-23 ರಿಂದ ಜಾರಿಗೆ ಬರುವಂತೆ ಅಂದಿನ ಸರ್ಕಾರ ಅಧಿಸೂಚನೆ ಸಹ ಹೊರಡಿಸಿತ್ತು. ಆದರೆ ಈಗ 38 ತಿಂಗಳ ಬಾಕಿ ವೇತನ ಪಾವತಿಗೆ ಬೇಡಿಕೆ ಇರಿಸಿರುವುದು ಸರಿ ಅಲ್ಲ ಎಂದು ಮುಖ್ಯಮಂತ್ರಿ ಅವರು ಹೇಳಿದರು.
,https://karunadasuddi.in/05/08/2025/breaking-news/bus-strick/
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


