ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಸರ್ಕಾರದ ಪರಿಸ್ಥಿತಿಯನ್ನೂ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ತಪ್ಪಿಲ್ಲ. ಸಾರಿಗೆ ನೌಕರರು ಹಠ ಮಾಡೋದು ಸರಿಯಲ್ಲ. ನೌಕರರು ಸಹಕಾರ ಕೊಡಬೇಕು. ಸಾರಿಗೆ ನೌಕರರ ಜೊತೆ ಸಿಎಂ ಹಾಗೂ ಸಚಿವರು ಸಭೆ ಮಾಡಿದ್ದಾರೆ. ಸರ್ಕಾರದ ಪರಿಸ್ಥಿತಿಯನ್ನು ಸಾರಿಗೆ ನೌಕರರು ಗಮನದಲ್ಲಿಟ್ಟುಕೊಳ್ಳಬೇಕು. ನಾಗರಿಕರ ವಿಚಾರವನ್ನೂ ಗಮದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಈಡೇರಿಸಲಾಗದ ಬೇಡಿಕೆಯನ್ನು ಈಡೇರಿಸಿ ಅನ್ನೋದು ಸರಿಯಲ್ಲ. ಎಲ್ಲದಕ್ಕಿಂತಲೂ ಸಾರ್ವಜನಿಕರ ಹಿತ ಮುಖ್ಯ. ಸಾರಿಗೆ ನೌಕರರು ಅರ್ಥ ಮಾಡಿಕೊಳ್ಳಿ. ಹಠ ಮಾಡೋದು ಬೇಡ ಎಂದು ಮನವಿ ಮಾಡಿದರು.
ಇನ್ನು ಹಳದಿ ಮೆಟ್ರೋ ಮಾರ್ಗದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್.10ರಂದು ಬೆಂಗಳೂರಿಗೆ ಬರಲಿದ್ದು, ನಾವು ಕೂಡ ಈ ಕಾರ್ಯಕ್ರಮಕ್ಕೆ ಭಾಗಿಯಾಗಬೇಕಾಗುತ್ತದೆ. ಬೇರೆ ಬೇರ ಕಾರ್ಯಕ್ರಮದ ಬಗ್ಗೆ ಇನ್ನೂ ಅಧಿಕೃತವಾಗಿ ಮಾಹಿತಿ ಬಂದಿಲ್ಲ. ಕಾರ್ಯಕ್ರಮದ ಸಮಯದ ಬಗ್ಗೆಯೂ ಇನ್ನೂ ಮಾಹಿತಿ ತಿಳಿಸಿಲ್ಲ. ಬಿಜೆಪಿಯವರ ರೈಲ್ವೆ ಕಾರ್ಯಕ್ರಮ ಹಾಗೂ ಮೆಟ್ರೋ ಉದ್ಘಾಟನೆ ಕೂಡ ಇದೆ ಎಂದು ತಿಳಿಸಿದರು.
ಹೊರಬಿತ್ತು ಹುಬ್ಬಳ್ಳಿಯ ನೇಹಾ ಹಿರೇಮಠ ಪ್ರಕರಣದ ಜಾಮೀನು ತೀರ್ಪು!
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


