ಮಹೀಂದ್ರ ಆಯಂಡ್ ಮಹೀಂದ್ರ ಕಂಪನಿಯು ತನ್ನ ಹೊಸ ಮಾದರಿಯ ಬಿಇ6 ಕಾರನ್ನು ಧರ್ಮಸ್ಥಳ ಕ್ಷೇತ್ರಕ್ಕೆ ಕೊಡುಗೆಯಾಗಿ ನೀಡಿದೆ. ಕಂಪನಿಯ ಉತ್ಪಾದನಾ ವಿಭಾಗದ ಮುಖ್ಯಸ್ಥ ವಿನಯ್ ಖಾನೋಲ್ಕರ್ ಭಾನುವಾರ ಇಲ್ಲಿ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಕಾರಿನ ಕೀ ಹಸ್ತಾಂತರಿಸಿದರು. ಈ ಕಾರನ್ನು ಗ್ರಾಮಾಭಿವೃದ್ಧಿ ಯೋಜನೆಗಳಿಗೆ ಬಳಸಲಾಗುವುದು. Mahindra BE 6E ಕಾರ್ ಬೆಲೆ 18 ಲಕ್ಷ ರೂಪಾಯಿಗಳಿಂದ ಆರಂಭವಾಗುತ್ತದೆ.ಧರ್ಮಸ್ಥಳ ಕ್ಷೇತ್ರಕ್ಕೆ ಮಹೀಂದ್ರ ಆಂಡ್ ಮಹೀಂದ್ರ ಕಂಪನಿ ಅರ್ಪಿಸುತ್ತಿರುವ ಮೂರನೇ ಕಾರ್ ಇದಾಗಿದೆ.
ಹೊಸ ಮಾದರಿಯ ವಾಹನ ತಯಾರಾದ ಕೂಡಲೆ ಅದನ್ನು ಕಾಣಿಕೆಯಾಗಿ ಧರ್ಮಸ್ಥಳಕ್ಕೆ ಅರ್ಪಿಸುವುದು ತಮ್ಮ ಕಂಪೆನಿಯ ಸಂಪ್ರದಾಯವಾಗಿದೆ. ಇದರಿಂದ ಕಂಪೆನಿ ಉನ್ನತ ಪ್ರಗತಿ ಸಾಧಿಸಿದೆ ಎಂದು ಹೊಸ ಕಾರಿನ ಕೀಯನ್ನು ಹೆಗ್ಗಡೆಯವರಿಗೆ ಹಸ್ತಾಂತರಿಸಿದ ಕಂಪೆನಿಯ ಉತ್ಪದನಾ ವಿಭಾಗದ ಮುಖ್ಯಸ್ಥ ವಿನಯ್ ಖಾನೋಲ್ಕರ್ ತಿಳಿಸಿದ್ದಾರೆ.
ಕಂಪೆನಿಯ ಉದಾರ ಕೊಡುಗೆಯನ್ನು ಸ್ವೀಕರಿಸಿದ ಹೆಗ್ಗಡೆಯವರು ಕಂಪೆನಿಯು ಈ ಹಿಂದೆ ತಯಾರಿಸಿದ ಹೊಸ ಮಾದರಿಯ ವಾಹನಗಳನ್ನು ಪ್ರಥಮವಾಗಿ ಧರ್ಮಸ್ಥಳಕ್ಕೆ ಅರ್ಪಿಸಿದ್ದು, ಇದು ಅವರ ಮೂರನೆ ಕೊಡುಗೆಯಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಇವರ ವಾಹನಗಳನ್ನು ಬಳಸಿಕೊಳ್ಳುತ್ತೇವೆ.
ದೇಶದ ಪ್ರತಿಷ್ಠಿತ ಮಹೇಂದ್ರ ಕಂಪೆನಿಯ ವಾಹನಗಳು ಯಾವುದೇ ಸಮಸ್ಯೆಗಳಿಲ್ಲದೆ ಉತ್ತಮ ಸೇವೆ ನೀಡುತ್ತಿವೆ. ದೇಶದ ಸೇನೆಯ ವಿಭಾಗಕ್ಕೂ ಅವರು ವಾಹನಗಳನ್ನು ಪೂರೈಸುತ್ತಿದ್ದು, ತನ್ಮೂಲಕ ದೇಶಸೇವೆಗೂ ಉತ್ತಮ ಸೇವೆ ನೀಡುತ್ತಿದ್ದಾರೆ ಎಂದು ಹೇಳಿ ಹೆಗ್ಗಡೆಯವರು ಕಂಪೆನಿಯ ವ್ಯವಹಾರದಲ್ಲಿ ಉತ್ತರೋತ್ತರ ಪ್ರಗತಿಯನ್ನು ಸಾಧಿಸಲಿ ಎಂದು ಹಾರೈಸಿದರು.
,ಏರ್ ಇಂಡಿಯಾ ವಿಮಾನದಲ್ಲಿ ಜಿರಳೆ! ನಂತರ ಆದದ್ದೇನು?
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


