ತುಮಕೂರಿನ ಮಧುಗಿರಿ ತಾಲೂಕಿನಲ್ಲಿ 19 ನವಿಲುಗಳು ಸಾವನ್ನಪ್ಪಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರದಲ್ಲಿ 19 ನವಿಲುಗಳು ನಿಗೂಢವಾಗಿ ಮೃತಪಟ್ಟಿದೆ. ಜಮೀನು ಒಂದರಲ್ಲಿ ಈ ದುರ್ಘಟನೆ ನಡೆದಿದ್ದು, ಜಮೀನಿಗೆ ತೆರಳಿದ್ದ ಮಾಲೀಕರು ಜಮೀನಿನಲ್ಲಿ ಸತ್ತು ಬಿದ್ದಿದ್ದ ನವಿಲುಗಳನ್ನು ಕಂಡು ಸ್ಥಳೀಯ ಪೊಲೀಸರಿಗೂ ಹಾಗೂ ವಲಯದ ಅರಣ್ಯಾಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ.
14 ಹೆಣ್ಣು ನವಿಲುಗಳು ಸೇರಿ 19 ನವಿಲುಗಳ ಮೃತದೇಹ ಪತ್ತೆ ಆಗಿದೆ. ತನಿಖೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ನೇತೃತ್ವದ ತಂಡ ನಡೆಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನವಿಲುಗಳ ಸಾವಿನ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು.
ಸಾವಿಗೆ ಕೀಟನಾಶಕ ಸೇವನೆ ಕಾರಣ ಎಂಬ ಅಂಶ ಮಾಧ್ಯಮಗಳಲ್ಲಿ ವರದಿಯಾಗಿದೆ. ನವಿಲುಗಳನ್ನು ಸಾಯಿಸಲೆಂದೇ ವಿಷ ಹಾಕಲಾಗಿತ್ತೆ ಅಥವಾ ಬೆಳೆಗಳಿಗೆ ಸಿಂಪಡಿಸಿದ ಕೀಟನಾಶಕಯುಕ್ತ ಫಸಲು ತಿಂದು ನವಿಲುಗಳು ಮೃತಪಟ್ಟಿವೆಯೇ ಎಂಬ ಬಗ್ಗೆ ತನಿಖೆ ನಡೆಸಿ, ಐದು ದಿನಗಳಲ್ಲಿ ವರದಿ ಸಲ್ಲಿಸಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಲಾಗಿದೆ’ ಎಂದರು.
,ಡೆತ್ ನೋಟ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಜಾನಪದ ಗಾಯಕಿಯ ಮಗ!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


