ಬೆಂಗಳೂರು: ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಆಗಸ್ಟ್.6ರ ಬಳಿಕ ಮತ್ತೆ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಗಸ್ಟ್.6ರ ಬಳಿಕ ಧಾರಾಕಾರ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಕೋಲಾರ ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು ನಗರ, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಹಾವೇರಿ, ಬೆಳಗಾವಿ, ರಾಯಚೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಯಾದಗಿರಿ, ವಿಜಯಪುರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇನ್ನು ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯಕ್ಕೆ ಮತ್ತಷ್ಟು ನೀರು ಹರಿದು ಬರಲಿದ್ದು, ಜಲಾಶಯದ ಹೊರಹರಿವನ್ನು ಏರಿಕೆ ಮಾಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಶಾಕ್: ರಜೆ ಹಾಗೂ ವಾರದ ರಜೆ ರದ್ದು
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


