ಮುಂಬೈನಲ್ಲಿ 34 ವಾಹನಗಳಲ್ಲಿ ಮಾನವಬಾಂಬ್ಗಳನ್ನು ಇರಿಸಲಾಗಿದೆ ಎಂದು ಪೊಲೀಸರಿಗೆ ಎಚ್ಚರಿಕೆಯ ಸಂದೇಶ ಬಂದಿದೆ. ಲಷ್ಕರ್-ಎ-ಜಿಹಾದಿ ಎಂಬ ಸಂಘಟನೆಯಿಂದ ಬಾಂಬ್ ಬೆದರಿಕೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ .
ನಾಳೆ ಅನಂತ ಚತುರ್ದಶಿ ಹಾಗೂ ಗಣೇಶನ ವಿಸರ್ಜನೆ ಮಾಡುವ ದಿನ. ಮುಂಬೈನಲ್ಲಿ ನಾಳೆ ಗಣೇಶನ ವಿಸರ್ಜನೆ ವಿಜೃಂಭಣೆಯಿಂದ ನಡೆಯುತ್ತದೆ . ಈ ಸಂದರ್ಭದಲ್ಲಿ ಸಂಚಾರ ಪೊಲೀಸರ ಅಧಿಕೃತ ವಾಟ್ಸಾಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಲಷ್ಕರ್-ಎ-ಜಿಹಾದಿ ಎಂದು ಕರೆದುಕೊಳ್ಳುವ ಸಂಘಟನೆಯು 14 ಪಾಕಿಸ್ತಾನಿ ಭಯೋತ್ಪಾದಕರು ಭಾರತವನ್ನು ಪ್ರವೇಶಿಸಿದ್ದಾರೆ ಮತ್ತು ಸ್ಫೋಟಗಳಿಗೆ 400 ಕೆಜಿ ಆರ್‌ಡಿಎಕ್ಸ್ ಬಳಸಲಾಗುವುದು ಎಂದು ಬೆದರಿಕೆ ಇದೆ.
ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚೆತ್ತುಕೊಂಡಿರುವ ಪೊಲೀಸರು ಇಡೀ ಮುಂಬೈ ನಗರದಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


