ಬೆಳ್ತಂಗಡಿ: ಯೂಟ್ಯೂಬರ್ ಅಭಿಷೇಕ್‌ನನ್ನು ಎಸ್‌ಐಟಿ ಮೂರನೇ ದಿನವಾದ ಇಂದೂ ಸಹ ವಿಚಾರಣೆಗೊಳಪಡಿಸಿ ಬುರುಡೆ ಪ್ರಕರಣ ಸಂಬಂಧ ಹಲವು ಮಾಹಿತಿಗಳನ್ನು ಪಡೆದುಕೊಂಡಿದೆ.
ಯೂ ಟ್ಯೂಬ್‌ನಲ್ಲಿ ಬಿತ್ತರಗೊಂಡಿದ್ದ ವಿಡಿಯೋ ಆಧರಿಸಿ ವಿಚಾರಣೆಗೆ ಹಾಜರಾಗುವಂತೆ ಅಭಿಷೇಕ್‌ಗೆ ಎಸ್‌ಐಟಿ ಅಧಿಕಾರಿಗಳು ನೋಟೀಸ್ ನೀಡಿದ್ದರು. ಹಾಗಾಗಿ ಮೊನ್ನೆ ಅಭಿಷೇಕ್ ಎಸ್‌ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾನೆ.
ಹೊರಗೆ ಹೋದರೆ ಜೀವ ಭಯವಿರುವುದಾಗಿ ಅಭಿಷೇಕ್ ಎಸ್‌ಐಟಿ ಕಚೇರಿಯಲ್ಲೇ ಉಳಿದುಕೊಂಡಿದ್ದಾನೆಂಬ ಮಾಹಿತಿ ಲಭ್ಯವಾಗಿದೆ.
ನಿನ್ನೆ ಎಸ್‌ಐಟಿ ಕಚೇರಿಯಲ್ಲಿ ಮತ್ತೆ ಅಭಿಷೇಕ್‌ನನ್ನು ವಿಚಾರಣೆಗೊಳಪಡಿಸಿದ್ದ ಅಧಿಕಾರಿಗಳು ಇಂದು ಮತ್ತೆ ಆತನನ್ನು ವಿಚಾರಣೆ ನಡೆಸಿ ಇನ್ನಷ್ಟು ಮಾಹಿತಿಗಳನ್ನು ಅಧಿಕಾರಿಗಳು ಕಲೆ ಹಾಕಿದ್ದಾರೆ ಎಂಬುದು ಗೊತ್ತಾಗಿದೆ.
ಅಮೆರಿಕಾದಲ್ಲೂ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಸಲಾಗುತ್ತಿದೆ: ಎಂ.ಬಿ ಪಾಟೀಲ್
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


