Monday, August 31, 2026
spot_img
More
    spot_img
    HomeJobsಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್:‌ 18000 ಶಿಕ್ಷಕರ ನೇಮಕಾತಿ ಘೋಷಿಸಿದ ಮಧು ಬಂಗಾರಪ್ಪ

    ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್:‌ 18000 ಶಿಕ್ಷಕರ ನೇಮಕಾತಿ ಘೋಷಿಸಿದ ಮಧು ಬಂಗಾರಪ್ಪ

    ಬೆಂಗಳೂರು: ರಾಜ್ಯದಲ್ಲಿ 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

    Advertisement

    ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಹಮಿಕೊಂಡಿದ್ದ ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣರವರ ಜನ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ, ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

    ಕಲಬುರಗಿ ಭಾಗದಲ್ಲಿ 5 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. 800 ಕೆಪಿಎಸ್‌‍ಸಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. 5 ಸಾವಿರ ದ್ವಿಭಾಷಾ ಶಾಲೆಗಳನ್ನು ಮಂಜೂರು ಮಾಡಲಾಗಿದೆ ಎಂದು ಅವರು ತಿಳಿಸಿದರು.

    1 ಸಾವಿರವಿದ್ದ ಎಲ್‌ಕೆಜಿ, ಯುಕೆಜಿ ಶಾಲೆಗಳನ್ನು 4 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೂ ಅನುಮೋದನೆ ನೀಡಲಾಗಿದೆ. 6 ದಿನಗಳ ಕಾಲ ಮಕ್ಕಳ ಭೌತಿಕತೆ ಹೆಚ್ಚಲು ಮೊಟ್ಟೆ ಇಲ್ಲವೇ ಬಾಳೆಹಣ್ಣನ್ನು ನೀಡಲಾಗುತ್ತಿದೆ ಎಂದರು.
    ನಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಾಲೆಗಳ ಮೂಲ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.

    ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಸಂವಿಧಾನ ಪೀಠಿಕೆಯನ್ನು ಶಿಕ್ಷಣ ಸಚಿವರು ಬೋಧಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲಾ ಮಕ್ಕಳಿಗೆ ಶುಭ ಕೋರಿದರು.

    ಧರ್ಮಸ್ಥಳ: ಬುರುಡೆ ವಿಡಿಯೊ ಮೊದಲಿಗೆ ಅಪ್‌ಲೋಡ್‌ ಮಾಡಿದ್ದ ಕೇರಳದ ಯುಟ್ಯೂಬರ್‌ಗೆ ನೋಟಿಸ್

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading