Wednesday, September 2, 2026
spot_img
More
    spot_img
    HomeLatest newsಸ್ಥಳೀಯ ಚುನಾವಣೆಯಲ್ಲಿ ಬ್ಯಾಲಟ್‌ ಪೇಪರ್‌ ಬಳಸಿದರೆ ಬಿಜೆಪಿಗೆ ಭಯ ಏಕೆ? ಡಿಕೆಶಿ ಪ್ರಶ್ನೆ

    ಸ್ಥಳೀಯ ಚುನಾವಣೆಯಲ್ಲಿ ಬ್ಯಾಲಟ್‌ ಪೇಪರ್‌ ಬಳಸಿದರೆ ಬಿಜೆಪಿಗೆ ಭಯ ಏಕೆ? ಡಿಕೆಶಿ ಪ್ರಶ್ನೆ

    ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಮಾಡುವ ಬಗ್ಗೆ ಬಿಜೆಪಿಯವರಿಗೆ ಏಕೆ ಆತಂಕ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.

    Advertisement

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಜಾರಿಗೆ ತರಲು ರಾಜ್ಯಸರ್ಕಾರಕ್ಕೆ ಅವಕಾಶವಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಮಾಡಿರುವ ಕಾನೂನಿನಲ್ಲಿ ಮತಪತ್ರ ಅಥವಾ ಇವಿಎಂ ಬಳಕೆ ಎಂಬುದಿದೆ. ಹೀಗಾಗಿ ನಾವು ಮತಪತ್ರ ಬಳಕೆಗೆ ತೀರ್ಮಾನಿಸಿದ್ದೇವೆ ಎಂದು ಸಮರ್ಥಿಸಿಕೊಂಡರು.

    ಮತಪತ್ರ ಬಳಕೆ ಕುರಿತಂತೆ ಬಿಜೆಪಿಯವರಿಗೆ ಗಾಬರಿ ಏಕೆ? ಕಳ್ಳನ ಮನಸ್ಸು ಹುಳ್ಳಗೆ ಎಂದ ಹಾಗೆ ಆಗಿದೆ. ಕೇಂದ್ರ ಸರ್ಕಾರ ಲೋಕಸಭೆ, ವಿಧಾನಸಭೆ ಚುನಾವಣೆ ಬಗ್ಗೆ ತೀರ್ಮಾನ ಮಾಡುತ್ತಾರೆ. ಚುನಾವಣಾ ಆಯೋಗವು ಆ ಬಗ್ಗೆ ತೀರ್ಮಾನ ಮಾಡುತ್ತದೆ. ನಮದು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮಾತ್ರ ಸೀಮಿತವಾಗಿದೆ ಎಂದರು.

    ರಾಮನಗರದ ರೈತರು ನಮ ಜನರು. ಅವರ ಬಗ್ಗೆ ಮಾತನಾಡಲು ನನಗೆ ಹಕ್ಕಿದೆ. ಶೇ.82 ರಷ್ಟು ರೈತರು ಜಮೀನು ಕೊಡಲು ಒಪ್ಪಿದ್ದಾರೆ. ಶೇ. 18 ರಷ್ಟು ಜನರು ಮಾತ್ರ ವಿರೋಧ ಮಾಡುತ್ತಿದ್ದಾರೆ. ಈಗಾಗಲೇ ಒಳ್ಳೆಯ ಬೆಲೆ ಕೊಟ್ಟಿದ್ದು ದೇಶಕ್ಕೆ ಮಾದರಿಯಾಗುವ ಯೋಜನೆ ಮಾಡಲು ಉದ್ದೇಶಿಸಿದ್ದೇವೆ ಎಂದು ಹೇಳಿದರು.

    ಈಗ ಟೀಕೆ ಮಾಡುವವರು ಅವರ ಆಡಳಿತಾವಧಿಯಲ್ಲಿ ಯೋಜನೆ ಏಕೆ ಮಾಡಿಲ್ಲ? ಅವರ ಅವಧಿಯಲ್ಲೇ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಪ್ರತಿಭಟಿಸುವವರಲ್ಲಿ ಯಾವ ಪಾರ್ಟಿಗೆ ಸೇರಿದ್ದರು, ಯಾವ ಶಾಲು ಹಾಕಿದ್ದರು ಎಂಬುದು ನನಗೆ ಗೊತ್ತಿದೆ ಎಂದು ಅವರು ತಿಳಿಸಿದರು.

    ನೈಸ್ ವಿಚಾರ ಸುಪ್ರೀಂಕೋರ್ಟ್‍ನಲ್ಲಿ ಇದ್ದು, ಅಲ್ಲಿ ತೀರ್ಮಾನವಾಗುವವರೆಗೂ ಏನೂ ಮಾಡಲು ಆಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

    ಸಚಿವ ಸಂಪುಟ ಸಭೆಯಲ್ಲಿ ಕೇವಲ ನಮ ಬೆಂಬಲಿಗರ ಕೇಸುಗಳನ್ನಷ್ಟೇ ವಾಪಸ್ಸು ಪಡೆದಿಲ್ಲ. ಬಿಜೆಪಿಯವರ ಕೇಸುಗಳನ್ನೂ ವಾಪಸ್ಸು ಪಡೆಯಲು ತೀರ್ಮಾನ ಮಾಡಲಾಗಿದೆ. ಇ.ಡಿ. ಬಂಧನದ ಸಂದರ್ಭದಲ್ಲಿ ಏನೂ ಮಾಡಲಿಲ್ಲ. ಆದರೂ ನಮ ಕಾರ್ಯಕರ್ತರ ಮೇಲೆ ಬಿಜೆಪಿಯವರು ಕೇಸು ಹಾಕಿಸಿದ್ದರು. ನನ್ನ ಮೇಲೂ ಕೇಸು ಹಾಕಿದ್ದರು. ನಾವು ನೋಡಿಕೊಂಡು ಕೂರಬೇಕಾ? ಈಗಾಗಲೇ ನನ್ನನ್ನು ಬಂಧಿಸಿದ ಪ್ರಕರಣ ವಜಾ ಆಗಿದೆ. ನನಗೆ ನ್ಯಾಯ ಕೊಡುವವರು ಯಾರು? ಜೈಲಿನಿಂದ ಬಿಡುಗಡೆಯಾಗಿ ಬಂದಾಗ ಅದು ದೊಡ್ಡ ಸಂಭ್ರಮಾಚರಣೆ ಎಂದು ಯಾರೆಲ್ಲಾ ಟೀಕೆ ಮಾಡಿದ್ದರು? ಸುಪ್ರೀಂಕೋರ್ಟ್‍ನಲ್ಲಿ ಆ ಕೇಸು ವಜಾ ಆದಾಗ ಏಕೆ ಅಭಿನಂದನೆ ಸಲ್ಲಿಸಲಿಲ್ಲ? ಎಂದು ಬಿಜೆಪಿಯವರಿಗೆ ತಿರುಗೇಟು ನೀಡಿದರು.

    ಸ್ಥಳೀಯ ಚುನಾವಣೆಗಳಿಗೆ ಬ್ಯಾಲೆಟ್‌ ಪೇಪರ್‌ ಬಳಕೆ; ರಾಜ್ಯ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading