Wednesday, September 2, 2026
spot_img
More
    spot_img
    HomeLatest newsಸ್ಥಳೀಯ ಚುನಾವಣೆಗಳಿಗೆ ಬ್ಯಾಲೆಟ್‌ ಪೇಪರ್‌ ಬಳಕೆ; ರಾಜ್ಯ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ

    ಸ್ಥಳೀಯ ಚುನಾವಣೆಗಳಿಗೆ ಬ್ಯಾಲೆಟ್‌ ಪೇಪರ್‌ ಬಳಕೆ; ರಾಜ್ಯ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ

    ಬೆಂಗಳೂರು: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ(ಇವಿಎಂ) ಬದಲಿಗೆ ಮತಪತ್ರ(ಬ್ಯಾಲೆಟ್ ಪೇಪರ್) ಬಳಸಿ ಚುನಾವಣೆ ನಡೆಸಲು ನಾವು ಸಿದ್ದರಿದ್ದೇವೆ ಎಂದು ರಾಜ್ಯ ಚುನಾವಣಾ ಮುಖ್ಯ ಆಯುಕ್ತ ಜಿ.ಎಸ್.ಸಂಗ್ರೇಸಿ ಹೇಳಿದ್ದಾರೆ.

    Advertisement

    ಖಾಸಗಿ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಅವರು, ಇದು ಸ್ಥಳೀಯ ಸಂಸ್ಥೆ ಚುನಾವಣೆಯಾಗಿರುವುದರಿಂದ ಮತದಾರರ ಪಟ್ಟಿಯನ್ನು ನಾವೇ ಸಿದ್ದಪಡಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆ. ಈಗಿರುವ ನಿಯಮಗಳಿಗೆ ರಾಜ್ಯ ಸರ್ಕಾರ ತಿದ್ದುಪಡಿ ಮಾಡಿದರೆ ಬ್ಯಾಲೆಟ್‍ಪೇಪರ್ ಮೂಲಕವೇ ಚುನಾವಣೆ ನಡೆಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದ್ದೇವೆ ಎಂದು ತಿಳಿಸಿದರು.

    ರಾಜ್ಯ ಚುನಾವಣಾ ಆಯೋಗ ಒಂದು ಸಾಂವಿಧಾನಿಕ ಹಾಗೂ ಸ್ವಾಯತ್ತ ಸಂಸ್ಥೆ. ಇವಿಎಂ ಬದಲು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಕಾಯ್ದೆ, ನಿಯಮಗಳಿಗೆ ತಿದ್ದುಪಡಿ ಮಾಡಿದರೆ ಅದರ ಪ್ರಕಾರವೇ ಚುನಾವಣೆ ಮಾಡಬೇಕಾಗುತ್ತದೆ. ನಮ್ಮದೇ ಪ್ರತ್ಯೇಕ ಮತದಾರರ ಪಟ್ಟಿ ಸಿದ್ದಪಡಿಸಲು ಮತ್ತು ಪರಿಷ್ಕರಿಸಲು ಅವಕಾಶ ನೀಡಿದರೆ ನಾವು ಮಾಡುತ್ತೇವೆ ಎಂದರು.

    ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ತಿದ್ದುಪಡಿ ಮಾಡಬೇಕಾದರೆ ಭಾರತೀಯ ಚುನಾವಣಾ ಆಯೋಗ(ಇಸಿಐ) ಅನುಮತಿ ಪಡೆಯಬೇಕಾಗುತ್ತದೆ. ಇದು ಸ್ಥಳೀಯ ಸಂಸ್ಥೆ ಚುನಾವಣೆಯಾಗಿರುವುದರಿಂದ ಹಾಲಿ ಇರುವ ನಿಯಮಗಳಿಗೆ ಕೆಲವೊಂದು ತಿದ್ದುಪಡಿ ಮಾಡಬೇಕಾಗುತ್ತದೆ. ಇದಕ್ಕೆ ಇಸಿಐನ ಅನುಮತಿ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

    ಹಾಲಿ ಇರುವ ಇವಿಎಂಗಳು ತುಂಬ ಹಳೆಯದಾಗಿರುವುದರಿಂದ ಇವುಗಳನ್ನು ವಿಲೇವಾರಿ ಮಾಡಬೇಕೆಂದು ಚುನಾವಣಾ ಆಯೋಗ ಸೂಚನೆ ಕೊಟ್ಟಿದೆ.

    ಮಹಾನಗರ ಪಾಲಿಕೆ, ನಗರಪಾಲಿಕೆ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸೇರಿದಂತೆ ಸ್ಥಳೀಯ ಚುನಾವಣೆಗಳನ್ನು ನಾವು ಹೊಸ ಇವಿಎಂಗಳ ಮೂಲಕವೇ ನಡೆಸಬೇಕು. ಅಂತಿಮವಾಗಿ ರಾಜ್ಯ ಸರ್ಕಾರ ಯಾವ ನಿಯಮಗಳನ್ನು ತಿದ್ದುಪಡಿ ಮಾಡಲು ಸೂಚನೆ ನೀಡುತ್ತದೆಯೋ ಅದರ ಮೇಲೆ ಅವಲಂಬಿತವಾಗಿದೆ ಎಂದು ಸಂಗ್ರೇಸಿ ಮಾಹಿತಿ ನೀಡಿದರು.

    ಬ್ಯಾಲೆಟ್ ಪೇಪರ್ಗಳನ್ನು ಬಳಸುವುದರಿಂದ ಮತದಾರರಿಗೆ ಯಾವುದೇ ಗೊಂದಲ ಉಂಟಾಗುವುದಿಲ್ಲ. ಈ ಹಿಂದೆ ಇದನ್ನು ಬಳಸಿರುವ ರೂಢಿ ಇರುವ ಕಾರಣ ಸುಲಭವಾಗಿ ಮತದಾನ ನಡೆಯುತ್ತದೆ. ಒಂದಿಷ್ಟು ಮಾನವಶ್ರಮ ಮತ್ತು ಸಂಪನ್ಮೂಲ ಹೊರೆಯಾಗಬಹುದೇ ಹೊರತು ಉಳಿದಂತೆ ಸಮಸ್ಯೆ ಉಂಟಾಗುವುದಿಲ್ಲ ಎಂದು ಅವರು ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು.

    ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯ ಚುನಾವಣಾ ಆಯೋಗ ವ್ಯಾಪ್ತಿಯ ಚುನಾವಣೆಗಳಲ್ಲಿ ಮತಪತ್ರವನ್ನು ಬಳಸಲು ಅವಕಾಶವಿದೆ. ಇದಕ್ಕಾಗಿ ಯಾರ ಅನುಮತಿಯು ಅಗತ್ಯವಿಲ್ಲ. ಚುನಾವಣಾ ಆಯೋಗ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತದೆ ಎಂದರು.

    ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡಲು ಕಾಯ್ದೆಗೆ ತಿದ್ದುಪಡಿ ತರಬೇಕಿದ್ದು, ಸುಗ್ರೀವಾಜ್ಞೆ ಮೂಲಕ ಅಥವಾ ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ ಪಡೆಯಬೇಕಿದೆ. ಇಲ್ಲ ಸಚಿವ ಸಂಪುಟ ಶಿಫಾರಸ್ಸನ್ನು ಚುನಾವಣಾ ಆಯೋಗಕ್ಕೆ ಕಳುಹಿಸಬಹುದು. ಆಗ ಚುನಾವಣಾ ಆಯೋಗ ಒಪ್ಪಬಹುದು ಇಲ್ಲ ಬಿಡಬಹುದು. ಹಾಗಾಗಿ ಕಾಂಗ್ರೆಸ್ ಸರ್ಕಾರದ ಈ ಮಹತ್ವದ ನಿರ್ಧಾರ ಮುಂದಿನ ದಿನಗಳಲ್ಲಿ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆ ಇದೆ.

    ಚರ್ಚೆಗೆ ನಾಂದಿ
    ರಾಜ್ಯ ಸರ್ಕಾರವು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂಗಳನ್ನು ನಿಷೇಧಿಸಿ ಕಾಗದದ ಮತಪತ್ರಗಳಿಗೆ ಮರಳುತ್ತಿದೆ, ಇದು ಚುನಾವಣಾ ಸಮಗ್ರತೆಯ ಕುರಿತಾದ ರಾಷ್ಟ್ರೀಯ ಚರ್ಚೆಗೆ ತಿರುವು ನೀಡಿದೆ.ಹಲವಾರು ಪಾಶ್ಚಿಮಾತ್ಯ ಪ್ರಜಾಪ್ರಭುತ್ವಗಳು ಕೂಡ ಇವಿಎಂ ನಿಷೇಧಿಸಿ ಮತ ಪತ್ರ ಬಳಕೆಗೆ ಮುಂಜಾಗಿರುವುದನ್ನು ಇಲ್ಲಿ ಉಲ್ಲೇಖಿಸಬಹುದಾಗಿದೆ. ಜರ್ಮನಿ, ನೆದರ್‍ಲ್ಯಾಂಡ್ಸ್ ಮತ್ತು ಐರ್ಲೆಂಡ್‍ನಂತಹ ದೇಶಗಳು ಪಾರದರ್ಶಕತೆಯ ಕಾಳಜಿಯಿಂದಾಗಿ ಎಲೆಕ್ಟ್ರಾನಿಕ್ ಮತದಾನದಿಂದ ದೂರ ಉಳಿದಿವೆ.

    ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಒಂದು ಕಾಲದಲ್ಲಿ ಎಲೆಕ್ಟ್ರಾನಿಕ್ ಮತದಾನದ ಪ್ರವರ್ತಕನಾಗಿತ್ತು ಭಾರತ, ಆದರೆ ಈಗ ರಾಜಕೀಯವಾಗಿ ಪ್ರಭಾವಶಾಲಿಯಾಗಿರುವ ರಾಜ್ಯಗಳು ಇವಿಎಂ ಯಂತ್ರಗಳ ಕಾರ್ಯ ನಿರ್ವಹಣೆ ಬಗ್ಗೆ ಪ್ರಶ್ನೆ ಎತ್ತುತ್ತಿವೆ.

    ಇವಿಎಂಗಳು ಸುರಕ್ಷಿತವಾಗಿವೆ, ವಿವಿಪಿಎಟಿ ಪೇಪರ್ ಟ್ರಯಲ್‍ನಿಂದ ಬೆಂಬಲಿತವಾಗಿವೆ ಎಂದು ಇಸಿಐ ತಿಳಿಸಿದೆ. ಸುಪ್ರೀಂ ಕೋರ್ಟ್ ಪದೇ ಪದೇ ಅವುಗಳ ವಿಶ್ವಾಸಾರ್ಹತೆಯನ್ನು ಎತ್ತಿಹಿಡಿದಿದೆ, ಆದರೆ ಅನುಮಾನಗಳು ಸಾಯುತ್ತಿಲ್ಲ ಎಂದಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ‘ಮತ ಚೋರಿ’ ಬಗ್ಗೆ ಪ್ರಕಟವಾದ ಸುದ್ದಿಗಳು ಇದಕ್ಕೆ ಮತ್ತಷ್ಟು ಪುಷ್ಠಿ ನೀಡುತ್ತಿವೆ.

    ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ: ಯತ್ನಾಳ್ ವಿರುದ್ಧದ ಕೇಸ್ ರದ್ದುಗೊಳಿಸಿದ ಕೋರ್ಟ್

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading