Friday, September 25, 2026
spot_img
More
    spot_img
    HomeLatest newsಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ, ಬ್ರೆಜಿಲಿಯನ್‌ ಮಾಡೆಲ್‌ನಿಂದ 25 ವೋಟ್; ಸಾಕ್ಷಿ ಸಮೇತ ಬಿಚ್ಚಿಟ್ಟ ರಾಹುಲ್‌...

    ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ, ಬ್ರೆಜಿಲಿಯನ್‌ ಮಾಡೆಲ್‌ನಿಂದ 25 ವೋಟ್; ಸಾಕ್ಷಿ ಸಮೇತ ಬಿಚ್ಚಿಟ್ಟ ರಾಹುಲ್‌ ಗಾಂಧಿ

    ನವದೆಹಲಿ: ಮತ್ತೆ ಮತಗಳ್ಳತನ ಆರೋಪ ಮಾಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು, ಹರಿಯಾಣದಲ್ಲೂ 25 ಲಕ್ಷ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

    ಈ ಕುರಿತು ನವದೆಹಲಿಯಲ್ಲಿ ಇಂದು ದಾಖಲೆ ಸಮೇತ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಬ್ಬ ಮಹಿಳೆ 25 ಬಾರಿ ವೋಟ್‌ ಮಾಡಿದ್ದಾರೆ. ವಿಪರ್ಯಾಸವೆಂದರೆ ಆ ಕಳ್ಳ ಮತದಾನಕ್ಕೆ ಬ್ರೆಜಿಲ್‌ನ ಮಾಡೆಲ್‌ ಫೋಟೊ ಬಳಸಲಾಗಿದೆ ಎಂದು ರಾಹುಲ್‌ ಆರೋಪಿಸಿದ್ದಾರೆ. ನಾನು ಹೇಳುತ್ತಿರುವುದು 100% ಸತ್ಯ. ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದರು.

    ಹಲವು ರಾಜ್ಯಗಳಲ್ಲಿ ಮತ ಕಳ್ಳತನದ ದೂರುಗಳು ನಮಗೆ ಬಂದಿವೆ. ಎಲ್ಲಾ ಸಮೀಕ್ಷೆಗಳು ಹರಿಯಾಣದಲ್ಲಿ ಕಾಂಗ್ರೆಸ್‌ ಗೆಲುವಿನತ್ತ ಬೆರಳು ತೋರಿಸಿದ್ದವು. ಹರಿಯಾಣದ ಚುನಾವಣಾ ಇತಿಹಾಸದಲ್ಲಿ ಮೊದಲ ಬಾರಿಗೆ ಅಂಚೆ ಮತಗಳು ನಿಜವಾದ ಮತದಾನಕ್ಕಿಂತ ಭಿನ್ನವಾಗಿದ್ದವು. ಇದು ನನಗೆ ಆಶ್ಚರ್ಯವನ್ನುಂಟುಮಾಡಿದೆ. ನೀವೆಲ್ಲಾ ನೋಡಲಿರುವ ಈ ಮಾಹಿತಿಯನ್ನು ನಾನು ಮೊದಲು ನೋಡಿದಾಗ ನಾನು ಅದನ್ನು ನಂಬಲು ಕಷ್ಟಪಟ್ಟೆ. ನಾನು ತೀವ್ರ ಆಘಾತಕ್ಕೊಳಗಾಗಿದ್ದೆ ಎಂದು ಹೇಳಿದರು.

    ಸೆಪ್ಟೆಂಬರ್.‌17ರಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ರಾಹುಲ್‌ ಗಾಂಧಿ ಅವರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದರು. ಚುನಾವಣಾ ಆಯೋಗ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಗಳನ್ನು ಸುಳ್ಳು ಹಾಗೂ ಆಧಾರರಹಿತ ಎಂದು ತಳ್ಳಿಹಾಕಿತ್ತು.

    ವಿಮಾನ ಪ್ರಯಾಣಿಕರಿಗೆ ಕೇಂದ್ರದಿಂದ ಭರ್ಜರಿ ಗುಡ್ ನ್ಯೂಸ್: 48 ಗಂಟೆ ಉಚಿತ ರದ್ದತಿ, ತಿದ್ದುಪಡಿ ಸೌಲಭ್ಯ!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading