Tuesday, November 10, 2026
spot_img
More
    spot_img
    HomeSportsCricketದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಗೆ ಭಾರತ ತಂಡ ಪ್ರಕಟ: ಆರ್‌ಸಿಬಿ ನಾಯಕ ಮತ್ತು ಆ...

    ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಗೆ ಭಾರತ ತಂಡ ಪ್ರಕಟ: ಆರ್‌ಸಿಬಿ ನಾಯಕ ಮತ್ತು ಆ ಅನುಭವಿ ಆಟಗಾರನಿಗೆ ಮೋಸ ಎಂದ ನೆಟ್ಟಿಗರು!

    ಬೆಂಗಳೂರು: ಭಾರತ ಪ್ರವಾಸ ಕೈಗೊಳ್ಳಲಿರುವ ದಕ್ಷಿಣ ಆಫ್ರಿಕಾ ತಂಡ ಎರಡು ಪಂದ್ಯಗಳ ಟೆಸ್ಟ್‌ ಸರಣಿಯನ್ನಾಡಲಿದ್ದು, ಈ ಸರಣಿಗೆ ಬಿಸಿಸಿಐ 15 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದೆ.

    ತಂಡಕ್ಕೆ ಶುಬ್‌ಮನ್ ಗಿಲ್‌ ನಾಯಕನಾಗಿದ್ದು, ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ರಿಷಬ್‌ ಪಂತ್‌ ತಂಡಕ್ಕೆ ವಾಪಸ್ಸಾಗಿ ಉಪನಾಯಕನ ಜವಾಬ್ದಾರಿ ಸ್ವೀಕರಿಸಿದ್ದಾರೆ.

    ಇನ್ನು ಈ ವರ್ಷ ದೇಶೀಯ ಕ್ರಿಕೆಟ್‌ನಲ್ಲಿ ಅಬ್ಬರಿಸಿರುವ ರಜತ್‌ ಪಟಿದಾರ್‌ಗೆ ತಂಡದಲ್ಲಿ ಸ್ಥಾನ ನೀಡಿಲ್ಲ ಎಂದು ನೆಟ್ಟಿಗರು ಬೇಸರ ಹೊರಹಾಕಿದ್ದು, ಜತೆಗೆ ಮೊಹಮ್ಮದ್‌ ಶಮಿ ಅವರನ್ನು ಮತ್ತೊಮ್ಮೆ ಬಿಸಿಸಿಐ ಕಡೆಗಣಿಸಿದೆ ಎಂದು ದೂರಿದ್ದಾರೆ.

    ಈ ವರ್ಷದಲ್ಲೇ 10 ಇನ್ನಿಂಗ್ಸ್‌ ಆಡಿ 78.88 ಸರಾಸರಿಯೊಂದಿಗೆ ಬ್ಯಾಟ್‌ ಬೀಸಿ 3 ಶತಕ, 3 ಅರ್ಧಶತಕ ಸಹಿತ 710 ರನ್‌ ಬಾರಿಸಿರುವ ರಜತ್‌ ಪಟಿದಾರ್‌ ಇನ್ನಿಂಗ್ಸ್‌ವೊಂದರಲ್ಲಿ ಅಜೇಯ 205 ರನ್‌ ಬಾರಿಸಿದ್ದು ಅತ್ಯಧಿಕ ರನ್‌ ಆಗಿದೆ. ಹೀಗೆ ಗಮನಾರ್ಹ ಆಟವನ್ನಾಡಿದ್ದರೂ ತಂಡದಲ್ಲಿ ಸ್ಥಾನ ಕಲ್ಪಿಸದೇ ಇರುವುದು ಮೋಸ ಎಂದು ಹಲವರು ಆಕ್ರೋಶ ಹೊರಹಾಕಿದ್ದಾರೆ.

    ಇನ್ನು ಮೊಹಮ್ಮದ್‌ ಶಮಿ ರಣಜಿ ಟ್ರೋಫಿಯಲ್ಲಿ 3 ಪಂದ್ಯಗಳಲ್ಲಿ 14 ವಿಕೆಟ್‌ ಪಡೆದು ಮಿಂಚಿದ್ದರೂ ಪರಿಗಣಿಸದೇ ಇರುವುದು ಬಿಸಿಸಿಐನ ಒಳ ರಾಜಕೀಯವನ್ನು ಬಹಿರಂಗಪಡಿಸಿದೆ ಎಂದು ಹಲವರು ಕಿಡಿಕಾರಿದ್ದಾರೆ.

    ಸರಣಿಗೆ ಪ್ರಕಟವಾಗಿರುವ ತಂಡ ಹೀಗಿದೆ: ಶುಭ್ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್) (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುಧರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೇಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಆಕಾಶ್ ದೀಪ್

    ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಗೆ ಭಾರತ ತಂಡ ಪ್ರಕಟ: ಪಂತ್‌ ಈಸ್‌ ಬ್ಯಾಕ್; ಇಬ್ಬರು ಕನ್ನಡಿಗರಿಗೆ ಸ್ಥಾನ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search