ಬೆಂಗಳೂರು: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ತಂಡ ಇನ್ನೂ ಟಿ20 ಸರಣಿ ಮುಗಿಸುವುದು ಬಾಕಿ ಇರುವಾಗಲೇ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ.
ದಕ್ಷಿಣ ಆಫ್ರಿಕಾ ಭಾರತ ಪ್ರವಾಸವನ್ನು ಕೈಗೊಳ್ಳಲಿದ್ದು, ಎರಡು ಟೆಸ್ಟ್ ಪಂದ್ಯ 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.
ಮೊದಲಿಗೆ ನಡೆಯಲಿರುವ ಟೆಸ್ಟ್ ಸರಣಿಗೆ 15 ಆಟಗಾರರ ತಂಡ ಪ್ರಕಟವಾಗಿದ್ದು, ಗಾಯಗೊಂಡಿದ್ದ ರಿಷಬ್ ಪಂತ್ ತಂಡಕ್ಕೆ ಮರಳಿದ್ದಾರೆ. ಕನ್ನಡಿಗರಾದ ಕೆಎಲ್ ರಾಹುಲ್ ಹಾಗೂ ದೇವದತ್ ಪಡಿಕ್ಕಲ್‌ಗೆ ತಂಡದಲ್ಲಿ ಸ್ಥಾನ ದೊರಕಿದೆ.
ಸರಣಿಗೆ ಪ್ರಕಟವಾಗಿರುವ ತಂಡ ಹೀಗಿದೆ: ಶುಭ್ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್) (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುಧರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೇಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಆಕಾಶ್ ದೀಪ್
ತಂಡವನ್ನು ನಾಯಕನಾಗಿ ಶುಬ್‌ಮನ್ ಗಿಲ್ ಮುನ್ನಡೆಸಲಿದ್ದು, ಮೊದಲ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನವೆಂಬರ್ 14ರಿಂದ 18ರವರೆಗೆ ನಡೆಯಲಿದೆ ಹಾಗೂ ಎರಡನೇ ಪಂದ್ಯ ನವೆಂಬರ್ 22ರಿಂದ 26ರವರೆಗೆ ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆಯಲಿದೆ.
ಮತಗಳ್ಳತನಕ್ಕೆ ವಿದೇಶಿ ಮಾಡೆಲ್ ಫೋಟೊ ಬಳಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮರ್ಯಾದೆ ಹರಾಜು: ಸಿದ್ದರಾಮಯ್ಯ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


