ಹಾಸನ: ಯುವತಿ ವಿಚಾರಕ್ಕೆ ಯುವಕನೋರ್ವನ ಬಟ್ಟೆ ಬಿಚ್ಚಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಸದ್ಯ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಗೀಡಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೇಗೆ ಆತನನ್ನು ಶೆಡ್‌ಗೆ ಕರೆತಂದು ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದರೋ ಅದೇ ರೀತಿ ಇಲ್ಲಿಯೂ ಹಲ್ಲೆ ನಡೆದಿದೆ.
ಹಾಸನ ಹೊರವಲಯದ ಗೆಂಡೆಕಟ್ಟೆ ಅರಣ್ಯದಲ್ಲಿ ಈ ಘಟನೆ ನಡೆದಿದ್ದು, ಭರತ್ ಎಂಬ ಯುವಕ ಮೇಲೆ ಗುಂಪು ಹಲ್ಲೆ ನಡೆಸಿದೆ.
ಯುವತಿ ಹಾಗೂ ಹಣದ ವಿಚಾರಕ್ಕೆ ಭರತ್‌ನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಲಾಗಿದೆ.
ಕೆಲವರು ಭರತ್ ಮೇಲೆ ಹಲ್ಲೆ ನಡೆಸುತ್ತಿದ್ದರೆ, ಕೆಲವರು ಈ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ಸಂಬಂಧ ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


