Tuesday, March 24, 2026
spot_img
More
    spot_img
    HomeStateDistrictಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಸಾವು

    ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಸಾವು

    ಮಂಡ್ಯ: ಆಸ್ತಿ ವಿಚಾರವಾಗಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ಆತ್ಮಹತ್ಯಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

    ಮೃತರನ್ನು ಕೆ.ಆರ್.ಪೇಟೆ ತಾಲ್ಲೂಕಿನ ಮೂಡನಹಳ್ಳಿ ಗ್ರಾಮದ ಮಂಜೇಗೌಡ ಎಂದು ಗುರುತಿಸಲಾಗಿದೆ.

    ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಬೇಸತ್ತಿದ್ದ ಅವರು ನಿನ್ನೆ ಜಿಲ್ಲಾಧಿಕಾರಿ ಕಚೇರಿ ಎದುರು ಮೈ ಮೇಲೆ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

    ನಂತರ ಸ್ಥಳೀಯರು ಬೆಂಕಿ ನಂದಿಸಿ ಅವರನ್ನು ಮಿಮ್ಸ್‌ ಆಸ್ಪತ್ರೆಗೆ ದಾಖಲಿಸಿದ್ದರು. ದೇಹದ ಶೇಕಡಾ.60ರಷ್ಟು ಭಾಗ ಸುಟ್ಟು ಹೋಗಿದ್ದರಿಂದ ನಂತರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರೈತ ಮಂಜೇಗೌಡ ಮೃತಪಟ್ಟಿದ್ದಾರೆ.

    Disclaimer: ಯಾವುದೇ ಸಮಸ್ಯೆಗೂ ಸಾವೊಂದೇ ಪರಿಹಾರವಲ್ಲ. ಆತ್ಮಹತ್ಯೆಯ ಯೋಚನೆ ಬಂದರೆ ನಿಮ್ಮ ನೆಚ್ಚಿನ ವ್ಯಕ್ತಿ ಜೊತೆ ಮಾತನಾಡಿ ಪರಿಹಾರ ಕಂಡುಕೊಳ್ಳಿ. ಇಲ್ಲವೇ ಈ ಸಹಾಯವಾಣಿಗೆ ಕರೆಮಾಡಿ: 9152987821


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬ್ರೇಕಿಂಗ್! ರೂಪಾಯಿ ಕುಸಿತ—ಮೊದಲ ಬಾರಿಗೆ ₹93 ದಾಟಿದ ಡಾಲರ್, ಆರ್ಥಿಕತೆಗೆ ಶಾಕ್!

    “ರೂಪಾಯಿ ಕುಸಿತ 93” ಇದೀಗ ದೇಶದ ಆರ್ಥಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆ, ಭಾರತೀಯ ರೂಪಾಯಿ ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು ₹93 ಗಡಿ...

    ತೆಲಂಗಾಣ ಬಜೆಟ್ 2026: ಆರೋಗ್ಯ ಕ್ಷೇತ್ರಕ್ಕೆ ಭಾರೀ ಉತ್ತೇಜನ—₹1286 ಕೋಟಿ ಹೆಚ್ಚಳ!

    “ತೆಲಂಗಾಣ ಆರೋಗ್ಯ ಬಜೆಟ್ 2026” ಈಗ ರಾಜ್ಯ ರಾಜಕೀಯ ಹಾಗೂ ಸಾರ್ವಜನಿಕರಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆರೋಗ್ಯ ಸೇವೆಗಳನ್ನು ಬಲಪಡಿಸಲು ಸರ್ಕಾರ ದೊಡ್ಡ ಮಟ್ಟದ ಹೂಡಿಕೆ ಮಾಡಿದ್ದು, ಹೆಚ್ಚುವರಿ ₹1286 ಕೋಟಿ ಅನುದಾನ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading