ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ರಾಜ್ಯ ಮಹಿಳಾ ಆರೋಗ್ಯ ಎಂಟ್ರಿಯಾಗಿದೆ.
ಎಸ್‌ಐಟಿ ತನಿಖಾ ವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಆಯೋಗವು ಮಹಿಳೆಯರ ಮೇಲಿನ ಅತ್ಯಾಚಾರ, ನಾಪತ್ತೆ ಕುರಿತು ತನಿಖೆ ನಡೆಸುವಂತೆ ಪತ್ರದ ಮೂಲಕ ಮನವಿ ಮಾಡಿದೆ.
ಎಸ್‌ಐಟಿ ರಚನೆ ಆದಾಗಿನಿಂದ ಕೇವಲ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ಚಿನ್ನಯ್ಯ ಎಂಬ ವ್ಯಕ್ತಿಯ ಹೇಳಿಕೆಯನ್ನು ಆಧರಿಸಿ ಮಾನವ ಕಳೇಬರಗಳ ಉತ್ಖನನಕ್ಕೆ ಸೀಮಿತವಾಗಿ ಆತನ ಹೇಳಿಕೆ ಮಿತಿಯೊಳಗೆ ತನಿಖೆ ನಡೆದಿರುವುದು ಕಂಡು ಬಂದಿದೆ.
ಉತ್ಖನನದ ಸಂದರ್ಭದಲ್ಲಿ ದೊರೆತ ಅಸ್ಥಿಪಂಜರಗಳ ಅವಶೇಷಗಳ ಬಗ್ಗೆ ಸಾವು ಸಂಭವಿಸಿದ ಕಾರಣದ ಬಗ್ಗೆ ಅವುಗಳಲ್ಲಿ ಮಹಿಳೆಯರ ಅಸ್ಥಿಪಂಜರಗಳನ್ನು ಗುರುತಿಸುವ ಬಗ್ಗೆ ಕಾಡಿನ ಪ್ರದೇಶದಲ್ಲಿ ಅಸ್ಥಿಪಂಜರ ದೊರೆಯಲು ಕಾರಣಗಳ ಬಗ್ಗೆ ಮಾಹಿತಿ ಪತ್ತೆಹಚ್ಚುವ ಜೊತೆಗೆ, ಎಸ್‌ಐಟಿ ರಚನೆಯ, ಆಯೋಗದ ಕೋರಿಕೆ ಮತ್ತು ನಂತರದ ಸರ್ಕಾರದ ಆದೇಶಕ್ಕೆ ಅನುಗುಣವಾಗಿ ಎಸ್‌ಐಟಿಯು ಕೂಡಲೇ ಮಹಿಳೆಯರು ಮತ್ತು ಯುವತಿಯರ ನಾಪತ್ತೆ ಹಾಗೂ ಅತ್ಯಾಚಾರ ಕೊಲೆ ಪ್ರಕರಣಗಳನ್ನು ಸೇರಿದಂತೆ ಎಲ್ಲಾ ಪ್ರಕರಣಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಯೋಗದ ಅಧ್ಯಕ್ಷ ಡಾ.ನಾಗಲಕ್ಷ್ಮೀ ಚೌಧರಿ ಪತ್ರದಲ್ಲಿ ಕೋರಿದ್ದಾರೆ.
ಮತಗಳ್ಳತನಕ್ಕೆ ವಿದೇಶಿ ಮಾಡೆಲ್ ಫೋಟೊ ಬಳಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮರ್ಯಾದೆ ಹರಾಜು: ಸಿದ್ದರಾಮಯ್ಯ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


