Monday, September 21, 2026
spot_img
More
    spot_img
    HomeLatest newsಚಿನ್ನಯ್ಯ ಹೇಳಿದ್ದು ಬಿಡಿ, ಸರಿಯಾಗಿ ತನಿಖೆ ಮಾಡಿ; ಧರ್ಮಸ್ಥಳ ಪ್ರಕರಣಕ್ಕೆ ಮಹಿಳಾ ಆಯೋಗ ಖಡಕ್‌ ಎಂಟ್ರಿ!

    ಚಿನ್ನಯ್ಯ ಹೇಳಿದ್ದು ಬಿಡಿ, ಸರಿಯಾಗಿ ತನಿಖೆ ಮಾಡಿ; ಧರ್ಮಸ್ಥಳ ಪ್ರಕರಣಕ್ಕೆ ಮಹಿಳಾ ಆಯೋಗ ಖಡಕ್‌ ಎಂಟ್ರಿ!

    ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ರಾಜ್ಯ ಮಹಿಳಾ ಆರೋಗ್ಯ ಎಂಟ್ರಿಯಾಗಿದೆ.

    Advertisement

    ಎಸ್‌ಐಟಿ ತನಿಖಾ ವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಆಯೋಗವು ಮಹಿಳೆಯರ ಮೇಲಿನ ಅತ್ಯಾಚಾರ, ನಾಪತ್ತೆ ಕುರಿತು ತನಿಖೆ ನಡೆಸುವಂತೆ ಪತ್ರದ ಮೂಲಕ ಮನವಿ ಮಾಡಿದೆ.

    ಎಸ್‌ಐಟಿ ರಚನೆ ಆದಾಗಿನಿಂದ ಕೇವಲ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ಚಿನ್ನಯ್ಯ ಎಂಬ ವ್ಯಕ್ತಿಯ ಹೇಳಿಕೆಯನ್ನು ಆಧರಿಸಿ ಮಾನವ ಕಳೇಬರಗಳ ಉತ್ಖನನಕ್ಕೆ ಸೀಮಿತವಾಗಿ ಆತನ ಹೇಳಿಕೆ ಮಿತಿಯೊಳಗೆ ತನಿಖೆ ನಡೆದಿರುವುದು ಕಂಡು ಬಂದಿದೆ.

    ಉತ್ಖನನದ ಸಂದರ್ಭದಲ್ಲಿ ದೊರೆತ ಅಸ್ಥಿಪಂಜರಗಳ ಅವಶೇಷಗಳ ಬಗ್ಗೆ ಸಾವು ಸಂಭವಿಸಿದ ಕಾರಣದ ಬಗ್ಗೆ ಅವುಗಳಲ್ಲಿ ಮಹಿಳೆಯರ ಅಸ್ಥಿಪಂಜರಗಳನ್ನು ಗುರುತಿಸುವ ಬಗ್ಗೆ ಕಾಡಿನ ಪ್ರದೇಶದಲ್ಲಿ ಅಸ್ಥಿಪಂಜರ ದೊರೆಯಲು ಕಾರಣಗಳ ಬಗ್ಗೆ ಮಾಹಿತಿ ಪತ್ತೆಹಚ್ಚುವ ಜೊತೆಗೆ, ಎಸ್‌ಐಟಿ ರಚನೆಯ, ಆಯೋಗದ ಕೋರಿಕೆ ಮತ್ತು ನಂತರದ ಸರ್ಕಾರದ ಆದೇಶಕ್ಕೆ ಅನುಗುಣವಾಗಿ ಎಸ್‌ಐಟಿಯು ಕೂಡಲೇ ಮಹಿಳೆಯರು ಮತ್ತು ಯುವತಿಯರ ನಾಪತ್ತೆ ಹಾಗೂ ಅತ್ಯಾಚಾರ ಕೊಲೆ ಪ್ರಕರಣಗಳನ್ನು ಸೇರಿದಂತೆ ಎಲ್ಲಾ ಪ್ರಕರಣಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಯೋಗದ ಅಧ್ಯಕ್ಷ ಡಾ.ನಾಗಲಕ್ಷ್ಮೀ ಚೌಧರಿ ಪತ್ರದಲ್ಲಿ ಕೋರಿದ್ದಾರೆ.

    ಮತಗಳ್ಳತನಕ್ಕೆ ವಿದೇಶಿ ಮಾಡೆಲ್‌ ಫೋಟೊ ಬಳಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮರ್ಯಾದೆ ಹರಾಜು: ಸಿದ್ದರಾಮಯ್ಯ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading